ಸಾಮೂಹಿಕ ರಾಜೀನಾಮೆಯಲ್ಲಿ ಬಿಜೆಪಿ ಕೈವಾಡ ಇಲ್ಲ: ಜೆಡಿಎಸ್ ಮುಖಂಡ!

Published : Jul 06, 2019, 02:45 PM ISTUpdated : Jul 06, 2019, 02:48 PM IST
ಸಾಮೂಹಿಕ ರಾಜೀನಾಮೆಯಲ್ಲಿ ಬಿಜೆಪಿ ಕೈವಾಡ ಇಲ್ಲ: ಜೆಡಿಎಸ್ ಮುಖಂಡ!

ಸಾರಾಂಶ

ಮೈತ್ರಿ ಸರ್ಕಾರದ 12 ಅತೃಪ್ತ ಶಾಸಕರಿಂದ ರಾಜೀನಾಮೆ;  ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಶಾಸಕರ ನಡೆ  

ಹುಬ್ಬಳ್ಳಿ (ಜು.06): ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಬಸವರಾಜ್ ಹೊರಟ್ಟಿ ಹೇಳಿದರು.

ಉಭಯಪಕ್ಷದ ಶಾಸಕರು ತಾವೇ ಕಚ್ಚಾಡಿಕೊಂಡು ರಾಜೀನಾಮೆ ಬೆದರಿಕೆ ಹಾಕುತ್ತಿದ್ದಾರೆ. ಜೆಡಿಎಸ್ ಶಾಸಕರು ರಾಜೀನಾಮೆಗೆ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ಇದಕ್ಕೆಲ್ಲ ಸಮನ್ವಯ ಸಮಿತಿ ತಪ್ಪುಗಳೇ ಕಾರಣ, ಎಂದು ಹೊರಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ | ರಾಜೀನಾಮೆ ನೀಡಲು ಬಂದ ಎರಡನೇ ಟೀಂ: ಆರ್. ಅಶೋಕ್ ಫುಲ್ ಆ್ಯಕ್ಟಿವ್!

ಯಾವೊಬ್ಬ ನಾಯಕರೂ ಜವಾಬ್ದಾರಿಯಿಂದ ಅತೃಪ್ತ ಶಾಸಕರ ಮನವೊಲಿಸಲಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಯಾರಿಗೂ ಮರು ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿಲ್ಲ. ಎಲ್ಲಾ ಅತೃಪ್ತರನ್ನು ಮಂತ್ರಿ ಮಾಡಲು ಆಗಲ್ಲ. ಬಿಜೆಪಿಯವರು ಸರ್ಕಾರ ರಚನೆಗೆ ಮುಂದಾಗದೇ ಇರುವುದೇ ಒಳಿತು, ಎಂದು ಅವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ