ಕಾವೇರಿ ವಿವಾದ: ಸುಪ್ರೀಂ ಕೋರ್ಟ್'ನಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ

Published : Sep 20, 2016, 10:07 AM ISTUpdated : Apr 11, 2018, 01:13 PM IST
ಕಾವೇರಿ ವಿವಾದ: ಸುಪ್ರೀಂ ಕೋರ್ಟ್'ನಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ

ಸಾರಾಂಶ

ನವದೆಹಲಿ (ಸೆ.20): ಕಾವೇರಿ ನದಿ ನೀರು ಹಂಚಿಕೆ ಕುರಿತು ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರಗಳ ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್ ಕರ್ನಾಟಕದ ವಾದಕ್ಕೆ ಮನ್ನಣೆ ನಿಡದೇ ದಿನಕ್ಕೆ 6 ಸಾವಿರ ಕ್ಯೂಸೆಕ್ಸ್  ನೀರು ಬಿಡಲು ಕರ್ನಾಟಕಕ್ಕೆ ಸೂಚಿಸಿದೆ. ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆಯಾಗಿದೆ. ಕರ್ನಾಟಕ ಪರ ವಕೀಲ ಫಾಲಿ ನಾರಿಮನ್ ಕರ್ನಾಟಕ ಸ್ತಿತಿಗತಿ, ವಿಸ್ತೃತ ವಿವರಣೆ. ಅಂಕಿ-ಅಂಶ ಸಮೇತ ಮಾಹಿತಿಯನ್ನು ನ್ಯಾಯಾಲಯದ ಮುಂದಿಟ್ಟರೂ ಅದನ್ನ ನ್ಯಾಯಾಲಯ ಪರಿಗಣಿಸಲಿಲ್ಲ. ತಾತ್ಕಾಲಿಕ ಆದೇಶ ನೀಡಬಾರದೆಂಬ ಮನವಿಗೂ ಕಿವಿಗೊಡಲಿಲ್ಲ. ಮುಂದಿನ ವಿಚಾರಣೆಯನ್ನು ಸೆ.28ಕ್ಕೆ ಮುಂದೂಡಿದೆ. ಸೆ.21 ರಿಂದ 27ರವರೆಗೆ 6 ಸಾವಿರ ಕ್ಯೂಸೆಕ್ಸ್  ನೀರು ಬಿಡಲು ಕರ್ನಾಟಕಕ್ಕೆ ಸೂಚಿಸಿದೆ.

ನ್ಯಾ. ದೀಪಕ್ ಮಿಶ್ರಾ ಹಾಗೂ ನ್ಯಾ. ಲಲಿತ್ ಉದಯ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು  ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಆದೇಶಿಸಿದೆ.  ನಾಲ್ಕು ವಾರಗಳೊಳಗೆ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಂಕಣ ರೈಲ್ವೆ ಭಾರತೀಯ ರೈಲ್ವೇ ವಿಲೀನಕ್ಕೆ ರಾಜ್ಯ ಸರ್ಕಾರಗಳ ಸಹಕಾರ ಬೇಕು: ಸಚಿವ ಅಶ್ವಿನಿ ವೈಷ್ಣವ್
ಆನ್‌ಲೈನ್ ಆರ್ಡರ್ ಮಾಡಿದ್ರೆ ಕೇಕ್ ಮೇಲೆ ಹೀಗಾ ಬರೆಯೋದು?: ಕೇಕ್ ಮೇಲಿನ ಬರಹ ನೋಡಿ ಬರ್ತ್‌ಡೇ ಗರ್ಲ್ ಶಾಕ್