
ಬೆಂಗಳೂರು : ನೂತನ ಸಮ್ಮಿಶ್ರ ಸರ್ಕಾರದ ಬಜೆಟ್‌ನ ಪೂರ್ವ ತಯಾರಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜನತಾ ದರ್ಶನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಪೂರ್ವ ತಯಾರಿಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಆಯವ್ಯಯ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಬೇಕಾಗಿರುವ ಕಾರಣ ಬಜೆಟ್ ಅಧಿವೇಶನ ಮುಕ್ತಾಯಗೊಳ್ಳುವವರೆಗೆ ಜನತಾ ದರ್ಶನ ಮತ್ತು ಸಾರ್ವಜನಿಕರ ಭೇಟಿಯನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಸೋಮವಾರ ಪ್ರಕಟಣೆ ನೀಡಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವೇಳೆ ನಿತ್ಯ ಜನತಾದರ್ಶನ ನಡೆಸುವುದಾಗಿ ಹೇಳಿದ್ದರು. ಅದರಂತೆ ಬೆಂಗಳೂರಿನಲ್ಲಿದ್ದಾಗ ಕುಮಾರಸ್ವಾಮಿ ಅವರು ಜನತಾದರ್ಶನ ನಡೆಸುತ್ತಿದ್ದರು.
ಅಲ್ಲದೆ, ಇತ್ತೀಚೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಲವು ಮಂದಿ ಜನತಾ ದರ್ಶನಕ್ಕೆ ಆಗಮಿಸುತ್ತಾರೆ. ಪ್ರತಿ ಜಿಲ್ಲೆಯಲ್ಲೂ ಜನತಾದರ್ಶನ ನಡೆಸುವ ಬಗ್ಗೆ ಮುಖ್ಯಮಂತ್ರಿ ಇಂಗಿತ ವ್ಯಕ್ತಪಡಿಸಿದ್ದರು. ಆದರೆ, ಜನತಾ ದರ್ಶನಕ್ಕಾಗಿಯೇ ಹೆಚ್ಚಿನ ಸಮಯ ವ್ಯಯವಾಗುತ್ತಿದ್ದುದರಿಂದ ಸದ್ಯಕ್ಕೆ ಮುಂದೂಡಲು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.