
ಮಂಡ್ಯ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುವವರೆಗೂ ಪಾದರಕ್ಷೆ ಧರಿಸದೇ ಬರಿಗಾಲಿನಲ್ಲೇ ನಡೆಯುವುದಾಗಿ ಮಂಡ್ಯದ ಅಭಿಮಾನಿಯೊಬ್ಬ ಸಂಕಲ್ಪ ಮಾಡಿದ್ದಾನೆ.
ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಎಂಬಾತ ನಗರದ ಕಾಳಿಕಾಂಬ ದೇವಸ್ಥಾನದಲ್ಲಿ ದೇವರ ಎದುರೇ ಈ ಶಪಥ ಮಾಡಿದ್ದಾನೆ. ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ನೂರಾರು ಕೋಟಿ ಅನುದಾನ ನೀಡಿ, ಹೈನುಗಾರರಿಗೆ ಪ್ರೋತ್ಸಾಹ ಧನ ನೀಡಿ ಆರ್ಥಿಕವಾಗಿ ಸಬಲರಾಗಲು ಯಡಿಯೂರಪ್ಪ ನೆರವಾಗಿದ್ದಾರೆ.
ಇಂತಹ ರೈತನಾಯಕ ಯಡಿಯೂರಪ್ಪ ಅವರು ಮತ್ತೊಮ್ಮೆ ರಾಜ್ಯದಲ್ಲಿ ಮುಖ್ಯಮಂತ್ರಿಯಾದರೆ ಮಾತ್ರ ರಾಜ್ಯದ ಪ್ರಗತಿ ಸಾಧ್ಯ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕು ಎಂಬ ಸಂಕಲ್ಪ ಮಾಡಿ ದೇವರಿಗೆ ಹರಕೆ ಹೊತ್ತಿದ್ದೇನೆ ಎಂದು ಆರಾಧ್ಯ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.