ಮಹಿಳಾ ದೌರ್ಜನ್ಯ ಎಸಗುವರಿಗೆ ಸರ್ಕಾರಿ ಸೌಲಭ್ಯ ಇಲ್ಲ

By Kannadaprabha NewsFirst Published Jul 13, 2018, 8:29 AM IST
Highlights

ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಪ್ರಕರಣಗಳಲ್ಲಿ ಯಾರ ವಿರುದ್ಧವಾದರೂ ಆರೋಪಪಟ್ಟಿದಾಖಲಾದರೆ, ಪಡಿತರವೊಂದನ್ನು ಹೊರತುಪಡಿಸಿ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ರದ್ದು ಮಾಡಲಾಗುತ್ತದೆ.

ಚಂಡೀಗಢ: ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಪ್ರಕರಣಗಳಲ್ಲಿ ಯಾರ ವಿರುದ್ಧವಾದರೂ ಆರೋಪಪಟ್ಟಿದಾಖಲಾದರೆ, ಪಡಿತರವೊಂದನ್ನು ಹೊರತುಪಡಿಸಿ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ರದ್ದು ಮಾಡಲಾಗುವುದು ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ ಲಾಲ್‌ ಖಟ್ಟರ್‌ ಗುರುವಾರ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮಹಿಳೆಯರ ಮೇಲಿನ ಅಪರಾಧ ಪಕ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಕೋರ್ಟ್‌ನಲ್ಲಿ ಆರೋಪಿಗಳ ವಿಚಾರಣೆ ನಡೆದು ಅಂತಿಮ ತೀರ್ಪು ಹೊರಬೀಳುವವರೆಗೂ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಹಿಂಪಡೆಯಲಾಗುವುದು. ತಪ್ಪಿತಸ್ಥರು ಯಾರೇ ಆಗಿರಲಿ, ಪುರುಷ ಅಥವಾ ಮಹಿಳೆಯಾಗಿದ್ದರೂ ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

click me!