
ಚೆನ್ನೈ (ಮೇ. 31): ಸಿಬಿಎಸ್‌ಇ ಸಿಲಬಸ್‌ನಲ್ಲಿ ಅಧ್ಯಯನ ಮಾಡುತ್ತಿರುವ 1 ಮತ್ತು 2 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಕರು ಹೋಂ ವರ್ಕ್ ನೀಡುವುದಕ್ಕೆ ಮದ್ರಾಸ್ ಹೈಕೋರ್ಟ್ ನಿಷೇಧ ಹೇರಿದೆ.
ಈ ಆದೇಶ ಪಾಲನೆಯಾಗುತ್ತಿದ್ದೆಯೇ ಎಂಬ ಬಗ್ಗೆ ಪರಿಶೀಲನೆಗಾಗಿ ಸಂಚಾರಿ ದಳ ನೇಮಿಸುವಂತೆಯೂ ಸಿಬಿಎಸ್‌ಇಗೆ ನ್ಯಾಯಾಲಯ ನಿರ್ದೇಶಿಸಿದೆ. ಅಲ್ಲದೆ, ಯುವ ವಿದ್ಯಾರ್ಥಿಗಳ ಹೊತ್ತೊಯ್ಯುವ ಭಾರೀ ತೂಕದ ಬ್ಯಾಗ್ ಬಗ್ಗೆಯೂ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಅಗತ್ಯವಿಲ್ಲದ ಪುಸ್ತಕಗಳ ಬಳಕೆ ನಿಲ್ಲಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರ್ದೇಶಿಸಬೇಕು. ಅಲ್ಲದೆ, ಈ ಬಗ್ಗೆ 4 ವಾರಗಳಲ್ಲಿ ತನಗೆ ವರದಿ ಸಲ್ಲಿಸಲು ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.