
ನವದೆಹಲಿ: 2019 ರ ಮಹಾಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಶತಾಯ ಗತಾಯ ಯತ್ನ ಆರಂಭಿಸಿರುವ ಕಾಂಗ್ರೆಸ್ ಪಕ್ಷ ಯುವ ಮತದಾರರನ್ನು ಒಲಿಸಿಕೊಳ್ಳಲು ಹೊಸ ದಾಳ ಉರುಳಿಸಲು ಸಜ್ಜಾಗಿದೆ. ತಾನು ಅಧಿಕಾರಕ್ಕೆ ಬಂದರೆ 35 ವರ್ಷ ವಯಸ್ಸಿನವರೆಗಿನ ವ್ಯಕ್ತಿಗಳಿಗೆ ತೆರಿಗೆ ಹಾಕುವುದಿಲ್ಲ ಎಂಬ ಅಂಶವನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಲು ಅದು ಚಿಂತನೆ ನಡೆಸಿದೆ.
ಜುಲೈ 13 ರಂದು ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ವಾದ್ರಾ ಕೂಡ ಇದ್ದರು ಎಂದು ಮೂಲಗಳು ಹೇಳಿವೆ. 2019 ರ ಲೋಕಸಭೆ ಚುನಾವಣೆಯಲ್ಲಿ ಸುಮಾರು ೧.೫ ಕೋಟಿ ಮತದಾರರು 35 ವರ್ಷದ ಒಳಗಿನವರಾಗಿರಲಿದ್ದು, ದೇಶದ ಜನಸಂಖ್ಯೆಯಲ್ಲಿ 2/ 3 ನೇ ಪಾಲು ಹೊಂದಿರುತ್ತಾರೆ.
ಇವರನ್ನು ಈ ರೀತಿಯ ಕ್ರಮಗಳಿಂದ ಆಕರ್ಷಿಸಬಹುದು. ಹೊಸ ಉದ್ಯೋಗಾವಕಾಶ, ಉದ್ದಿಮೆಗಳ ಸ್ಥಾಪನೆಗೆ ನೆರವಾಗಬಹುದು ಎಂದು ಕಾಂಗ್ರೆಸ್ ಮುಖಂಡರ ಅಭಿಪ್ರಾಯ ಎಂದು ಆನ್‌ಲೈನ್ ಮಾಧ್ಯಮವೊಂದು ವರದಿ ಮಾಡಿದೆ. ಪ್ರಣಾಳಿಕೆ ಸಮಿತಿ ನೇತೃತ್ವವನ್ನು ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ವಹಿಸಿಕೊಂಡಿದ್ದು, ಅವರು ಈ ವಿಷಯದ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.