
ಬೆಂಗಳೂರು[ಸೆ.26]: ಸರ್ಕಾರದ ಸೂಚನೆಯ ಮೇರೆಗೆ ಮದ್ಯದಂಗಡಿಗಳನ್ನು ಹೊಸದಾಗಿ ತೆರೆಯಲು ಪರವಾನಗಿ ನೀಡಲಾಗುತ್ತಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವಿಟರ್'ನಲ್ಲಿ ಸ್ಪಷ್ಟನೆ ನೀಡಿರುವ ಸಿಎಂ 'ಕೆಲವು ಮಾಧ್ಯಮಗಳು ಪ್ರಕಟಿಸಿರುವ ವಿಷಯ ಸತ್ಯಕ್ಕೆ ದೂರವಾದುದು. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಸಾರಾಯಿ ಮತ್ತು ಲಾಟರಿ ನಿಷೇಧ ಮಾಡಿದ್ದೆ. ಹೀಗಿರುವಾಗ ನಾನು ಇಂಥ ಸೂಚನೆ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯಲು ಪರವಾನಗಿ ನೀಡುವಂತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಬಕಾರಿ ಇಲಾಖೆಗೆ ಯಾವುದೇ ಸೂಚನೆ ನೀಡಿಲ್ಲ ಎಂದು ಮಂಡ್ಯದಲ್ಲಿ ಸ್ಪಷ್ಟ ಪಡಿಸಿದ್ದಾರೆ.
ಮಂಡ್ಯದಲ್ಲಿ ಪರಿಶೀಲನಾ ಸಭೆ
ಮಂಡ್ಯ ಜಿಲ್ಲೆಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಸಿಎಂ, ನಂತರ ಪ್ರವಾಸಿ ಮಂದಿರದ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ 20 ಬಸ್ ಗಳಿಗೆ ಚಾಲನೆ ನೀಡಿಲಾಯಿತು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ, ಲೋಕೋಪಯೋಗಿ ಸಚಿವರಾದ ಹೆಚ್.ಡಿ.ರೇವಣ್ಣ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಸೆ.29,30ರಂದು ಉದ್ಯೋಗ ಮೇಳ, ಜನತಾ ದರ್ಶನ
ಮುಖ್ಯಮಂತ್ರಿಯವರ ಜನತಾದರ್ಶನದಲ್ಲಿ ಉದ್ಯೋಗಕ್ಕಾಗಿ ಮನವಿ ಸಲ್ಲಿಸಿದವರು, ಜನತಾದರ್ಶನ ಅರ್ಜಿಯ ಸ್ವೀಕೃತಿ, ಸ್ವವಿವರ ಮತ್ತು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ಸಹಾಯವಾಣಿ ಸಂಖ್ಯೆ 080-4455 4455 ನ್ನು ಸಂಪರ್ಕಿಸಬಹುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.