
ಬೀದರ್ : ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆ ಉಂಟು ಮಾಡಿತ್ತು ಎನ್ನಲಾದ, ಮಾಜಿ ಸಚಿವ ಎಂ.ಬಿ. ಪಾಟೀಲ್ ಮುಂದಾಳತ್ವದ ಲಿಂಗಾಯತ- ಪ್ರತ್ಯೇಕ ಧರ್ಮ ಹೋರಾಟವನ್ನು ಲೋಕಸಭೆ ಚುನಾವಣೆವರೆಗೂ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಹೋರಾಟ ಮುಂದುವರಿಸಿದರೆ ಅದು ಬೇರೆಯದೇ ಸಂದೇಶ ರವಾನಿಸಬಹುದು ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ.
ಲೋಕಸಭೆ ಚುನಾವಣೆ ಸಮಯದಲ್ಲಿ ವಿರೋಧಿಗಳು ಸ್ವತಂತ್ರ ಧರ್ಮ ಹೋರಾಟಕ್ಕೆ ರಾಜಕೀಯ ಬಣ್ಣ ಬಳಿದು ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಾರೆ. ಹೀಗಾಗಿ ಚುನಾವಣೆ ಮುಗಿಯುವವರೆಗೆ ಯಾವುದೇ ಹೋರಾಟ, ಪ್ರತಿಭಟನೆ, ರಾರಯಲಿ ಹಮ್ಮಿಕೊಳ್ಳಬಾರದು ಎಂದು ನಿರ್ಣಯಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಸ್ವಾಮಿ ತಿಳಿಸಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಮುನ್ನೆಲೆಯಲ್ಲಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್ ಜೊತೆಗೆ ಆ.13ರಂದು ಬೀದರ್‌ನಲ್ಲಿ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗಾಗಿನ ಹೋರಾಟಕ್ಕೆ ಸಂಬಂಧಿಸಿ ಕೂಲಂಕುಷವಾಗಿ ಚರ್ಚೆ ನಡೆದಿತ್ತು. ಕೊನೆಗೆ ಈ ಹೋರಾಟದ ಭವಿಷ್ಯವನ್ನು ನಿರ್ಧರಿಸುವ ಅಧಿಕಾರವನ್ನು ಎಂ.ಬಿ. ಪಾಟೀಲ್ ಅವರಿಗೆ ನೀಡಲಾಗಿತ್ತು. ಈ ವೇಳೆ ಎಂ.ಬಿ.ಪಾಟೀಲ ಅವರ ನಿರ್ಧಾರದಂತೆ ಹೋರಾಟವನ್ನು ಲೋಕಸಭಾ ಚುನಾವಣೆ ನಂತರ ಚುರುಕುಗೊಳಿಸುವ ತೀರ್ಮಾನಕ್ಕೆ ಬರಲಾಯಿತು ಎಂದು ಶ್ರೀಕಾಂತ ಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಚುನಾವಣೆ ವೇಳೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ, ಭಾರೀ ಪರ-ವಿರೋಧಕ್ಕೆ ಕಾರಣವಾಗಿದ್ದ ಲಿಂಗಾಯತ ಸ್ವತಂತ್ರ ಧರ್ಮದ ಹೋರಾಟಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲು ನಿರ್ಧರಿಸಲಾಗಿದೆ. ಲೋಕಸಭೆ ಚುನಾವಣೆ ಮುಗಿಯುವವರೆಗೆ ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿನ ಮಾನ್ಯತೆ ಹೋರಾಟ ಸ್ಥಗಿತಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಸ್ವಾಮಿ ಹೇಳಿದ್ದಾರೆ.
ಬೀದರ್‌ದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಮುನ್ನಲೆಯಲ್ಲಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್ ಜೊತೆಗೆ ಆ.13ರಂದು ನಡೆದ ಬೀದರ್-ಕಲಬುರಗಿ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗಾಗಿನ ಹೋರಾಟಕ್ಕೆ ಸಂಬಂಧಿಸಿ ಕೂಲಂಕುಷವಾಗಿ ಚರ್ಚೆ ನಡೆದಿತ್ತು. ಕೊನೆಗೆ ಈ ಹೋರಾಟದ ಭವಿಷ್ಯವನ್ನು ನಿರ್ಧರಿಸುವ ಅಧಿಕಾರವನ್ನು ಎಂ.ಬಿ. ಪಾಟೀಲ್ ಅವರಿಗೆ ನೀಡಲಾಗಿತ್ತು. ಈ ವೇಳೆ ಎಂ.ಬಿ.ಪಾಟೀಲ ಅವರ ನಿರ್ಧಾರದಂತೆ ಹೋರಾಟವನ್ನು ಲೋಕಸಭಾ ಚುನಾವಣೆ ನಂತರ ಚುರುಕುಗೊಳಿಸುವ ತೀರ್ಮಾನಕ್ಕೆ ಬರಲಾಯಿತು ಎಂದು ಶ್ರೀಕಾಂತ ಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಪರಿಣಿತರ ನೇತೃತ್ವದ ವೈಜ್ಞಾನಿಕ ಸಮಿತಿ ನೀಡಿದ ವರದಿಯಾಧರಿಸಿ ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸೌಲಭ್ಯ ಕೊಡುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರದ ಅನುಮೋದನೆಗೆ ಕಳುಹಿಸಿಕೊಟ್ಟಿದೆ. ಕೇಂದ್ರ ಸರ್ಕಾರ ಈ ಪ್ರಸ್ತಾಪಕ್ಕೆ ಅನುಮೋದನೆ ಕೊಡುವ ನಂಬಿಕೆ ನಮಗಿದೆ. ಒಂದು ವೇಳೆ ತಿರಸ್ಕರಿಸಿದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಶ್ರೀಕಾಂತ ಸ್ವಾಮಿ ತಿಳಿಸಿದ್ದಾರೆ.
ಬಸವ ತತ್ವ ಹಾಗೂ ಅವರು ಸ್ಥಾಪಿಸಿದ ಲಿಂಗಾಯತ ಧರ್ಮಕ್ಕೆ ರಾಜಕೀಯ ತಳಕು ಹಾಕದೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು, ಇದು ನಮ್ಮೆಲ್ಲರ ಅಸ್ಮಿತೆಯ ಪ್ರಶ್ನೆ. ಲೋಕಸಭೆ ಚುನಾವಣೆ ಸಮಯದಲ್ಲಿ ವಿರೋಧಿಗಳು ಈ ಹೋರಾಟಕ್ಕೆ ರಾಜಕೀಯ ಬಣ್ಣ ಬಳಿದು ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಾರೆ. ಹೀಗಾಗಿ ಇನ್ಮುಂದೆ ಲೋಕಸಭೆ ಚುನಾವಣೆ ಮುಗಿಯುವವರೆಗೆ ಯಾವುದೇ ಹೋರಾಟ, ಪ್ರತಿಭಟನೆ ,ರಾರಯಲಿ ಹಮ್ಮಿಕೊಳ್ಳಬಾರದು ಎಂದು ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಶ್ರೀಕಾಂತ ಸ್ವಾಮಿ ಹೇಳಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.