ಬೆಂಗಳೂರಲ್ಲಿ 2 ದಿನ ಮಾಂಸ ಮಾರಾಟ ನಿಷೇಧ

By Web DeskFirst Published Apr 11, 2019, 8:37 AM IST
Highlights

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. 

ಬೆಂಗಳೂರು: ಶ್ರೀರಾಮನವಮಿ ಹಾಗೂ ಮಹಾವೀರ ಜಯಂತಿ ಅಂಗವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಏ.13 ಮತ್ತು ಏ. 17ರಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ. 

ಒಂದು ವೇಳೆ ಆದೇಶವನ್ನು ಉಲ್ಲಂಘಿಸಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ಕಂಡು ಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಮಹಾವೀರ ಜಯಂತಿ, ರಾಮನವಮಿ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಪ್ರಾಣಿ ಹತ್ಯೆಯನ್ನೂ ಮಾಡದಂತೆ ಸೂಚನೆ ನೀಡಲಾಗಿದೆ. 

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.

click me!