
ನವದೆಹಲಿ(ಜೂ.06): ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ಶೃಂಗ ಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಡುವೆ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿಲ್ಲ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ.
ಶಾಂಘೈ ಸಹಕಾರ ಸಂಘಟನೆ ಶೃಂಗ ಸಭೆ ವೇಳೆ ಮೋದಿ-ಇಮ್ರಾನ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಪಾಕ್ ಪ್ರಧಾನಿಯೊಂದಿಗೆ ಯಾವುದೇ ಮಾತುಕತೆ ನಡೆಯುವುದಿಲ್ಲ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
ಪ್ರಧಾನಿ ಮೋದಿ ಜೂ.13 ಮತ್ತು 14ರಂದು ಕಿರ್ಗಿಸ್ತಾನದ ರಾಜಧಾನಿ ಬಿಶ್ಕೆಕ್ ನಲ್ಲಿ ನಡೆಯುವ ಎಸ್ ಸಿಒ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.
ಆದರೆ ಈ ವೇಳೆ ಇಮ್ರಾನ್ ಖಾನ್ ಜೊತೆ ಪ್ರಧಾನಿ ಮೋದಿ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.