ಸರ್ಕಾರಿ ಶಾಲೆಗಳ ವಿಲೀನ ಆಗುತ್ತಾ..? ಇದಕ್ಕೆ ಮಿನಿಸ್ಟರ್ ಹೇಳೋದೇನು..?

Published : Sep 30, 2018, 12:43 PM ISTUpdated : Sep 30, 2018, 05:54 PM IST
ಸರ್ಕಾರಿ ಶಾಲೆಗಳ ವಿಲೀನ ಆಗುತ್ತಾ..? ಇದಕ್ಕೆ ಮಿನಿಸ್ಟರ್ ಹೇಳೋದೇನು..?

ಸಾರಾಂಶ

ಸುವರ್ಣ ನ್ಯೂಸ್‌ ನಡೆಸುವ ‘ಹಲೋ ಮಿನಿಸ್ಟರ್‌’ ನೇರ ಪ್ರಸಾರದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಎನ್‌.ಮಹೇಶ್‌ ಮಕ್ಕಳಿಗೆ ಕಲಿಸುವ ಬದಲಾಗಿ ಕಲಿಯುವಂತಾಗಬೇಕು. ಓಪನ್‌ ಬುಕ್‌ ಪರೀಕ್ಷೆ ಎಂದರೆ ಸಾಮಾನ್ಯ ಜನರಲ್ಲಿ ಗೊಂದಲವಿದ್ದು, ಮುಖ್ಯ ಪರೀಕ್ಷೆಯಲ್ಲಿ ಪುಸ್ತಕ ನೋಡಿಕೊಂಡು ಬರೆಯುವ ಪ್ರಕ್ರಿಯೆ ಎಂಬ ಅಭಿಪ್ರಾಯವಿದೆ. ಆದರೆ, ಓಪನ್‌ ಬುಕ್‌ ಪರೀಕ್ಷೆ ಕೇವಲ ಮಾಸಿಕ ಪರೀಕ್ಷೆಗಳಲ್ಲಿ ಮಾತ್ರ ಇರುತ್ತದೆ. ಇದರಿಂದ ಮಕ್ಕಳಲ್ಲಿನ ಬುದ್ಧಿಮತ್ತೆ ಹೆಚ್ಚಾಗಲಿದೆ ಎಂದು ವಿವರಿಸಿದರು.

ಬೆಂಗಳೂರು :  ಪ್ರಾಥಮಿಕ ಶಿಕ್ಷಣದಲ್ಲಿಯೇ ಮಕ್ಕಳ ಕ್ರಿಯಾಶೀಲತೆ ವೃದ್ಧಿಗೊಳಿಸಬೇಕು ಎಂಬ ಉದ್ದೇಶದಿಂದ ‘ಓಪನ್‌ ಬುಕ್‌ ಪರೀಕ್ಷೆ’ ಪರಿಚಯಿಸುತ್ತಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್‌.ಮಹೇಶ್‌ ಹೇಳಿದ್ದಾರೆ.

ಸುವರ್ಣ ನ್ಯೂಸ್‌ ನಡೆಸುವ ‘ಹಲೋ ಮಿನಿಸ್ಟರ್‌’ ನೇರ ಪ್ರಸಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಕಲಿಸುವ ಬದಲಾಗಿ ಕಲಿಯುವಂತಾಗಬೇಕು. ಓಪನ್‌ ಬುಕ್‌ ಪರೀಕ್ಷೆ ಎಂದರೆ ಸಾಮಾನ್ಯ ಜನರಲ್ಲಿ ಗೊಂದಲವಿದ್ದು, ಮುಖ್ಯ ಪರೀಕ್ಷೆಯಲ್ಲಿ ಪುಸ್ತಕ ನೋಡಿಕೊಂಡು ಬರೆಯುವ ಪ್ರಕ್ರಿಯೆ ಎಂಬ ಅಭಿಪ್ರಾಯವಿದೆ. ಆದರೆ, ಓಪನ್‌ ಬುಕ್‌ ಪರೀಕ್ಷೆ ಕೇವಲ ಮಾಸಿಕ ಪರೀಕ್ಷೆಗಳಲ್ಲಿ ಮಾತ್ರ ಇರುತ್ತದೆ. ಇದರಿಂದ ಮಕ್ಕಳಲ್ಲಿನ ಬುದ್ಧಿಮತ್ತೆ ಹೆಚ್ಚಾಗಲಿದೆ ಎಂದು ವಿವರಿಸಿದರು.

ಸೌಲಭ್ಯ ಕಲ್ಪಿಸಲು 4200 ಕೋಟಿ ಬೇಕು:

ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಕೊಠಡಿಗಳು ಸೇರಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು 4200 ಕೋಟಿ ರು. ಹಣ ಬೇಕು. ಆದರೆ, ಕೇವಲ 150 ಕೋಟಿ ಅನುದಾನ ಇದೆ. ಮುಖ್ಯಮಂತ್ರಿಗಳು ಪ್ರಸಕ್ತ ಆರ್ಥಿಕ ವರ್ಷದಲ್ಲಿ 430 ಕೋಟಿ ಹೆಚ್ಚುವರಿ ನೀಡುವುದಾಗಿ ಹೇಳಿದ್ದಾರೆ. ಅದನ್ನು ಬಳಕೆ ಮಾಡಿಕೊಂಡು ಸೌಲಭ್ಯ ಕಲ್ಪಿಸಲಾಗುವುದು. ಅಲ್ಲದೆ, ಖಾಸಗಿ ಸಹಭಾಗಿತ್ವದಲ್ಲಿ ಶಾಲೆಗಳ ಮೂಲ ಸೌಲಭ್ಯ ಹೆಚ್ಚಳ ಮಾಡಲು ಚಿಂತನೆಯಿದೆ ಎಂದು ತಿಳಿಸಿದರು.

ಶಿಕ್ಷಕರ ವರ್ಗಾವಣೆ ವಿಚಾರದಲ್ಲಿ ಕೆಲ ಗೊಂದಲಗಳಿವೆ. ಅವುಗಳನ್ನು ಸರಿಪಡಿಸಲು ಪ್ರಕ್ರಿಯೆ ವಿಳಂಬವಾಗಿದೆ. ಶೀಘ್ರದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ವರ್ಗಾವಣೆ ಪ್ರಕ್ರಿಯೆ ಪ್ರಾರಂಭಿಸಲಾಗುವುದು.

ವಿಲೀನ ಇಲ್ಲ:

ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವುದಿಲ್ಲ. ಈ ಬಗ್ಗೆ ಸಂಶಯ ಬೇಡ ಎಂದು ಸಚಿವರು ಇದೇ ವೇಳೆ ಸ್ಪಷ್ಟನೆ ನೀಡಿದರು.

ಪ್ರತಿ ಶಾಲೆಗೂ ದೈಹಿಕ ಶಿಕ್ಷಕ ಇರಬೇಕು. ಮಕ್ಕಳು ದೈಹಿಕವಾಗಿ ಸರಿಯಾಗಿದ್ದರೆ ಮಾತ್ರ ಮಾನಸಿಕವಾಗಿ ಸದೃಢರಾಗಿ ಶಿಕ್ಷಣಕ್ಕೆ ನೆರವಾಗಲಿದೆ. ಆದರೆ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆಯಿದೆ. ಈಗಿರುವ ಕೊರತೆಯನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುವುದು.

ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲಾ ಮಕ್ಕಳ ಬುದ್ಧಿಮತ್ತೆ ಹೆಚ್ಚಾಗಿರುತ್ತದೆ, ಅವರಲ್ಲಿನ ಕೌಶಲ್ಯವನ್ನು ಹೊರತರುವ ಕೆಲಸ ಶಿಕ್ಷಕರು ಮಾಡಬೇಕು. ಆಗ ಮಾತ್ರ ಖಾಸಗಿ ಶಿಕ್ಷಣ ಸಂಸ್ಥೆಗಳಿಂತೆ ನಮ್ಮ ಮಕ್ಕಳು ಹೆಚ್ಚು ಅಂಕಗಳನ್ನು ಗಳಿಸಲು ಸಾಧ್ಯ ಎಂದರು.

ಮೀಸಲಾತಿ ಗೊಂದಲದಿಂದ ವಿಳಂಬ:

ಸ್ನಾತಕೋತ್ತರ ಪದವಿಯಲ್ಲಿ ಪರಿಶಿಷ್ಟರು ಸೇರಿದಂತೆ ಎಲ್ಲ ವರ್ಗಗಳಿಗೂ ಶೇ.55 ಅಂಕ ನಿಗದಿ ಮಾಡಿದ್ದರಿಂದ 2015ರಿಂದ ಪಿಯು ಉಪನ್ಯಾಸಕರ ನೇಮಕ ಪ್ರಕ್ರಿಯೆ ಪ್ರಾರಂಭ ಮಾಡಿಲ್ಲ. ಪರಿಶಿಷ್ಟಜಾತಿ ಮತ್ತು ಪಂಗಡದ ವರ್ಗದವರಿಗೆ ಶೇ.5ರಷ್ಟುಅಂಕ ವಿನಾಯಿತಿ ನೀಡಬೇಕಾಗಿದೆ. ಈ ಗೊಂದಲ ಸರಿಪಡಿಸುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಹೇಳಿದರು.

ಆರ್‌ಟಿಇ ಬಗ್ಗೆ ಚಿಂತನೆ:

ಶಿಕ್ಷಣ ಹಕ್ಕು ಕಾಯಿದೆಯಿಂದಾಗಿ ಬಡ ಮಕ್ಕಳು ಖಾಸಗಿ ಶಾಲೆಗೆ ಹೋಗುತ್ತಿದ್ದಾರೆ. ಸರ್ಕಾರದ ಹಣ ನೀಡಿ ನಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಕಳುಹಿಸುತ್ತಿದೆ. ಇದರಿಂದ ಸರ್ಕಾರಿ ಶಾಲೆಯಲ್ಲಿ ಕೊರತೆಯಾಗುತ್ತಿದೆ. ಈ ಬಗ್ಗೆ ಗಂಭೀರ ಚಿಂತನೆ ನಡೆಯುತ್ತಿದೆ ಎಂದರು.

ಶಿಕ್ಷಕರಿಗೆ ಕಂಪ್ಯೂಟರ್‌ ತರಬೇತಿ:

ಕಂಪ್ಯೂಟರ್‌ ಶಿಕ್ಷಣವನ್ನು ಎಲ್ಲ ಸರ್ಕಾರಿ ಶಾಲೆಗಳಲ್ಲಿ ನೀಡಬೇಕಾಗಿದೆ. ಈ ವರ್ಷ ಒಂದು ಸಾವಿರ ಶಾಲೆಗಳಿಗೆ ಕಂಪ್ಯೂಟರ್‌ ನೀಡಲಾಗುತ್ತಿದೆ. ಜೊತೆಗೆ ಶಾಲಾ ಶಿಕ್ಷಕರಿಗೆ 10 ದಿನಗಳ ಕಾಲ ತರಬೇತಿ ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಮಾಧ್ಯಮ ಶಿಕ್ಷಣ ಇಲಾಖೆಯ ನಿರ್ದೇಶಕಿ ಫಿಲೋಮಿನಾ ಲೋಬೊ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಜಾಫರ್‌, ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಬಿ.ಕೆ.ಬಸವರಾಜು ಹಾಜರಿದ್ದರು.

’ಅಸ್ಪೃಶ್ಯತೆಗೊಳಗಾದವನನ್ನು, ಅಸ್ಪೃಶ್ಯತೆ ಮಾಡುವವನನ್ನು ನಾನು ದೂಷಿಸುವುದಿಲ್ಲ!’ 

ಬಾನಲ್ಲೂ ನೀನೆ, ಭುವಿಯಲ್ಲೂ ನೀನೆ: ಹಾಡೊಂದು ಕಟ್ಟಿತ್ತು ಸಚಿವರ ಮನೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಟ್ರೆಂಡ್ ಶುರು ಮಾಡಿದ್ದು ಮೆಹಬೂಬಾ: ನಿತೀಶ್‌ಕುಮಾರ್ ಬುರ್ಖಾ ಎಳೆದಿದ್ದಕ್ಕೆ ಮುಫ್ತಿಗೆ ಒಮರ್ ಟಾಂಗ್
ದರ್ಶನ್ ಭೇಟಿಗೆ, ಪವಿತ್ರಾ ಗೌಡ ಪರಿಪರಿಯಾಗಿ ಬೇಡಿಕೊಂಡರೂ ಡಿಜಿಪಿ ಅಲೋಕ್ ಕುಮಾರ್ ನಿರಾಕರಿಸಿದ್ದೇಕೆ!