ನಾಳೆ ಉತ್ತರ ಕರ್ನಾಟಕ ಬಂದ್ ಇಲ್ಲ

Published : Aug 01, 2018, 05:00 PM ISTUpdated : Aug 01, 2018, 05:11 PM IST
ನಾಳೆ ಉತ್ತರ ಕರ್ನಾಟಕ ಬಂದ್ ಇಲ್ಲ

ಸಾರಾಂಶ

ಸಿಎಂ, ಕೆಪಿಸಿಸಿ ಕಾರ್ಯಾಧ್ಯಕ್ಷ ಮನವಿ ಮೇರೆಗೆ ಬಂದ್ ವಾಪಸ್ ಬಂದ್ ಬದಲು 13 ಜಿಲ್ಲೆಗಳಲ್ಲಿ ಸಾಂಕೇತಿಕ ಧರಣಿ

ಬೆಂಗಳೂರು[ಆ.01]: ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ತಾರತಮ್ಯ ನೀತಿ ಹೇಳಿಕೆ ವಿರೋಧಿಸಿ ಅ.2ರಂದು ಕರೆಯಲಾಗಿದ್ದ ಉತ್ತರ ಕರ್ನಾಟಕ ಬಂದ್ ಅನ್ನು ಹಿಂಪಡೆಯಲಾಗಿದೆ.

ಬಂದ್ ನಡೆಸುವುದಿಲ್ಲ ಎಂದು  ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಸಮಿತಿ ಗೌರವ ಅಧ್ಯಕ್ಷ ಬಸವರಾಜ್ ದಿಂಡೂರ ಸುವರ್ಣ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸಭೆ ಸೇರಿದ್ದ  ಸಮಿತಿಯ ಪದಾಧಿಕಾರಿಗಳು ಹಾಗೂ ಹೋರಾಟಗಾರರು ಬಂದ್ ಕೈಗೊಳ್ಳುವುದಿಲ್ಲ ಎಂದು ತೀರ್ಮಾನಿಸಿದ್ದಾರೆ. 

ಸಿಎಂ ಮತ್ತು ಕಾಂಗ್ರೆಸ್ ಕಾರ್ಯಾಧ್ಯಕ್ಷರ ಮನವಿ ಮೇರೆಗೆ ಹೋರಾಟಗಾರರು ಬಂದ್ ವಾಪಸ್ ಪಡೆದಿದ್ದಾರೆ.ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗೆ  ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಬಂದ್ ಬದಲು ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗೆ 13 ಜಿಲ್ಲೆಗಳಲ್ಲಿ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಿ ತಹಶೀಲ್ದಾರ್, ಡಿಸಿಗಳಿಗೆ ಮನವಿ ಸಲ್ಲಿಸಲಾಗುತ್ತದೆ.  ಯಾವುದೇ ಕಾರಣಕ್ಕೂ ಜನಜೀವನಕ್ಕೆ ತೊಂದರೆ ನೀಡುವುದಿಲ್ಲ’. ಎಂದು ದಿಂಡೂರ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಸಿಎಂ ಕುಮಾರಸ್ವಾಮಿ ಸಮಾರಂಭವೊಂದರಲ್ಲಿ ಮಾತನಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಯ ಪ್ರಸ್ತಾಪ ಮಾಡಿದ್ದರು. ಪ್ರತ್ಯೇಕ ರಾಜ್ಯದ ಕೂಗಿಗೆ ಇದು ತುಪ್ಪ ಸುರಿದಂತಾಗಿತ್ತು. ವಿರೋಧ ಪಕ್ಷಗಳ ನಾಯಕರು ಸಿಎಂ ಹೇಳಿಕೆಯನ್ನು ವಿರೋಧಿಸಿದ್ದರು. ಪ್ರತ್ಯೇಕ ರಾಜ್ಯದ ಪರವಿದ್ದ ಹೋರಾಟಗಾರರಿಗೆ ಕುಮಾರಸ್ವಾಮಿಯವರ ಮಾತು ಕೆರಳಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ