
ಮೈಸೂರು: ರಾಜ್ಯದಲ್ಲಿ ನಮಗೆ ಜೆಡಿಎಸ್ ಜೊತೆ ಹೊಂದಾಣಿಕೆಯ ಅವಶ್ಯಕತೆ ಇಲ್ಲ. ರಾಜ್ಯಸಭಾ ಚುನಾವಣೆ ವಿಚಾರದಲ್ಲೂ ಜೆಡಿಎಸ್ ಜತೆ ಮಾತನಾಡಿಲ್ಲ, ಮಾತನಾಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಮುಂದೆ ನಮ್ಮ ಸಹಾಯ ಬೇಕಾದಲ್ಲಿ ರಾಜ್ಯಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಿ’ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದರು.
ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಂಗಳವಾರ ದೆಹಲಿಯಲ್ಲಿ ವರಿಷ್ಠರ ಜೊತೆ ಚರ್ಚಿಸುತ್ತೇನೆ. ಮೂರನೇ ಅಭ್ಯರ್ಥಿ ಹಾಕುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ವರಿಷ್ಠರೊಂದಿಗೆ ಸಮಾಲೋಚಿಸಿದ ನಂತರ ತೀರ್ಮಾನಿಸುತ್ತೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.