
ಬೆಂಗಳೂರು[ಮೇ. 19] ಲೈಂಗಿಕ ಬಯಕೆ ತೀರಿಸಿಕೊಳ್ಳಲು ವೇಶ್ಯಾಗೃಹಕ್ಕೆ ಹೋದವನಿಗೆ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಕರ್ನಾಟಕ ಹೈ ಕೋರ್ಟ್ ಅಭಿಪ್ರಾಯಪಟ್ಟಿದೆ.
ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಗಿರಾಕಿಗಳಿಗೆ ಶಿಕ್ಷೆ ನೀಡುವ ಅವಕಾಶವಿಲ್ಲ. ವೇಶ್ಯಾಗೃಹ ನಡೆಸುವವರು ಮತ್ತು ಅದಕ್ಕೆ ಪೂರಕವಾಗಿ ಕೆಲಸ ಮಾಡುವವರನ್ನು ಶಿಕ್ಷೆಗೆ ಗುರಿಪಡಿಸಬಹುದು ಎಂದು ಹೇಳಿದೆ.
ಏನಿದು ಪ್ರಕರಣ: ಬೆಂಗಳೂರಿನ ಸಂಜಯನಗರ ಠಾಣೆ ಪೊಲೀಸರು 2015ರಲ್ಲಿ ವೇಶ್ಯಾಗೃಹವೊಂದರ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದಲ್ಲಿ ವೇಶ್ಯಾಗೃಹ ನಡೆಸುವವರು ಮತ್ತು ಅಲ್ಲಿದ್ದ ಗಿರಾಕಿಗಳ ವಿರುದ್ಧ ಕೇಸ್ ದಾಖಲಾಗಿತ್ತು. ಐಪಿಸಿ 370 ,ಮಾನವ ಕಳ್ಳಸಾಗಣೆ ತಡೆ ಕಾಯ್ದೆ 3,4,5 ಮತ್ತು 7 ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು.
ಆದರೆ ಆರೋಪಿ ಸ್ಥಾನದಲ್ಲಿದ್ದ ಗಿರಾಕಿಯೊಬ್ಬ ಈ ಪ್ರಕರಣದ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರ ಏಕಸದಸ್ಯ ಪೀಠ ಇದೀಗ ಆದೇಶ ನೀಡಿದೆ. ಆರೋಪಿ ತಾನು ಹೋಗಿ ವೇಶ್ಯಾವಾಟಿಕೆಗೆ ಕುಮ್ಮಕ್ಕು ನೀಡಿದಂತಾದರೂ ಶಿಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಆರೋಪಿ ಸಲ್ಲಿಸಿದ ಮನವಿ ಪುರಸ್ಕರಿಸಿರುವ ನ್ಯಾಯಾಲಯ ಅವರ ಮೇಲಿದ್ದ ಪ್ರಕರಣ ವಜಾ ಮಾಡಿದೆ.
ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.