
ಬಾಗಲಕೋಟೆ (ಜ.25): ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್’ನ ಸಮಾವೇಶ ಬಸವಣ್ಣನ ಐಕ್ಯತಾಣ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ನಾಳೆ ನಡೆಯಲಿದೆ.
ಯಾವುದೇ ಕಾರಣಕ್ಕೂ ನಾಳೆ ಕೂಡಲಸಂಗಮದಲ್ಲಿ ನಡೆಯಲಿರುವ ಸಮಾವೇಶ ನಿಲ್ಲುವುದಿಲ್ಲವೆಂದು ವಿಪಕ್ಷ ನಾಯಕ ಈಶ್ವರಪ್ಪ ಹೇಳಿದ್ದಾರೆ.
ರಾಯಣ್ಣ ಬ್ರಿಗೇಡ್ ಪದಾಧಿಕಾರಿಗಳು ಕಳೆದ 3 ದಿನಗಳಿಂದ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದು, ಬೃಹತ್ ಪೆಂಡಾಲ್ ಹಾಕಲಾಗಿದೆ. ಇನ್ನು 1 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಹಿನ್ನೆಲೆಯಲ್ಲಿ ಆಸನಗಳ ವ್ಯವಸ್ಥೆಯನ್ನು ಮಾಡಲಾಗಿದ್ದು, ತಯಾರಿ ಕೆಲಸ ಭರದಿಂದ ಸಾಗಿದೆ.
ಸಮಾವೇಶದಲ್ಲಿ ನಾಡಿನ ಮಠಾಧೀಶರು, ನಾಯಕರುಗಳು ಭಾಗವಹಿಸಲಿದ್ದು, ಸಮಾವೇಶ ಯಶಸ್ವಿಯಾಗಲಿದೆ ಎಂದು ರಾಯಣ್ಣ ಬ್ರಿಗೇಡ್ ರಾಜ್ಯಾಧ್ಯಕ್ಷ ಕೆ.ವಿರುಪಾಕ್ಷಪ್ಪ ಹೇಳಿದ್ದಾರೆ.
ಕೂಡಲಸಂಗಮದ ರಸ್ತೆಗಳು, ವೃತ್ತಗಳು ರಾಯಣ್ಣ ಬ್ರಿಗೇಡ್ನ ಸಮಾವೇಶದ ಬ್ಯಾನರ್ಸ್, ಬಂಟಿಂಗ್ಸ್ಗಳಿಂದ ಕೂಡಿದ್ದು, ಎಲ್ಲೆಲ್ಲೂ ಹಳದಿ ಬಾವುಟಗಳು ಕಂಗೊಳಿಸುತ್ತಿವೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಜನರು ಆಗಮಿಸಲಿದ್ದು, ಅವರಿಗೆ ಊಟದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.