
ಬೆಂಗಳೂರು (ನ.21): ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಂತಿಲ್ಲ. ನಾನು ಅದರಲ್ಲಿ ಮುಂದುವರಿದಿದ್ದೇನೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮುಖಂಡ ರಾಮ್ ಲಾಲ್ ಜೊತೆ ಇದ್ರ ಬಗ್ಗೆ ಈಗಾಗಲೇ ಚರ್ಚೆ ಆಗಿದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಿಎಸ್ ವೈ ಹಾಗೂ ನಾನು ಆ ಸಭೆಯಲ್ಲಿ ಭಾಗಿಯಾಗಿದ್ದೇವೆ. ರಾಮ್ ಲಾಲ್ ಕೂಡ ರಾಯಣ್ಣ ಬ್ರಿಗೇಡ್ ನಿಲ್ಲಸಬೇಡಿ. ನೀವು, ಬಿಎಸ್ ವೈ ರಾಯಣ್ಣ ಬ್ರಿಗೇಡ್ ಮುಂದುವರೆಸಿ ಎಂದು ಸಲಹೆ ನೀಡಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ರಾಯಣ್ಣ ಬ್ರಿಗೇಡ್ಗೆ ಪದಾಧಿಕಾರಿಗಳನ್ನ ನೇಮಕ ಮಾಡಲಾಗಿದೆ. ಸಾಧು ಸಂತರು ಅದಕ್ಕೆ ಬೆಂಬಲ ನೀಡಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಡಿ. 6 ರಂದು ನಂದಗಢದಲ್ಲಿ ನೂತನ ಪದಾಧಿಕಾರಿಗಳು ಪ್ರತಿಜ್ನಾವಿಧಿ ಸ್ವೀಕಾರ ಮಾಡಲಿದ್ದಾರೆ. ಎಲ್ಲ ಮಠಾಧಿಪತಿಗಳು ಇದರಲ್ಲಿ ಭಾಗವಹಿಸಲಿದ್ದಾರೆ. ಇದೇ 27 ರಂದು ಬಿಜೆಪಿ ಹಿಂದುಳಿದ ಸಮಾವೇಶ ಹಿನ್ನಲೆಯಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಬರುತ್ತಿದ್ದಾರೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.