ಪೆಟ್ರೋಲ್‌, ಡೀಸೆಲ್‌ ದರ : ಕೇಂದ್ರದಿಂದ ಶಾಕ್

First Published Jun 5, 2018, 9:54 AM IST
Highlights

 ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳು ಏರಿಕೆಯಾಗಿರುವುದಕ್ಕೆ ಸಾರ್ವಜನಿಕವಾಗಿ ವ್ಯಾಪಕ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ, ತೈಲ ದರಗಳ ದೈನಂದಿನ ಪರಿಷ್ಕರಣೆ ನೀತಿಯನ್ನು ಸರ್ಕಾರ ಹಿಂಪಡೆಯಲಿದೆ ಎಂಬ ವರದಿಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. 

ದಾಹೇಜ್‌: ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳು ಏರಿಕೆಯಾಗಿರುವುದಕ್ಕೆ ಸಾರ್ವಜನಿಕವಾಗಿ ವ್ಯಾಪಕ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ, ತೈಲ ದರಗಳ ದೈನಂದಿನ ಪರಿಷ್ಕರಣೆ ನೀತಿಯನ್ನು ಸರ್ಕಾರ ಹಿಂಪಡೆಯಲಿದೆ ಎಂಬ ವರದಿಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ. 

ಬದಲಾಗಿ ತೈಲ ಬೆಲೆ ನಿಯಂತ್ರಣಕ್ಕೆ ಸರ್ಕಾರ ದೀರ್ಘಾವಧಿ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ. 

ಇಲ್ಲಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಧಾನ್‌, ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ತೆರಿಗೆ ವಿಧಿಸುವಾಗ ರಾಜ್ಯ ಸರ್ಕಾರಗಳು ಸಕಾರಣವಾದ ಮತ್ತು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಕಳೆದ ವರ್ಷ ಜೂನ್‌ನಿಂದ ತೈಲ ದರವನ್ನು ದೈನಂದಿನ ಪರಿಷ್ಕರಣೆ ಮಾಡಲಾಗುತ್ತಿದೆ.
 

click me!