
ನವದೆಹಲಿ: ದೇಶದಲ್ಲಿ ಉಪ್ಪಿನ ಕೊರತೆಯುಂಟಾಗಿದೆ ಎಂಬ ವದಂತಿ ಕುರಿತಂತೆ ಕೇಂದ್ರ ಸರ್ಕಾರ ಕಿಡಿಕಾರಿದ್ದು, ದೇಶದಲ್ಲಿ ಯಾವುದೇ ರೀತಿಯ ಉಪ್ಪಿನ ಕೊರತೆಯಿಲ್ಲ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಶನಿವಾರ ಹೇಳಿದೆ.
ಉತ್ತರ ಪ್ರದೇಶ ಹಾಗೂ ರಾಜಧಾನಿ ನವದೆಹಲಿಯ ಹಲವೆಡೆ ಉಪ್ಪಿನ ಕೊರತೆ ಉಂಟಾಗಿದ್ದು, ದುಬಾರಿ ಹಣವನ್ನು ನೀಡಿ ಉಪ್ಪನ್ನು ಖರೀದಿ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಮ್ ವಿಲಾಸ್ ಪಾಸ್ವಾನ್ ಅವರು, ದೇಶದಲ್ಲಿ ಸಾಕಷ್ಟು ಉಪ್ಪಿದೆ. ದೇಶದಲ್ಲಿ ಯಾವುದೇ ರೀತಿಯ ಉಪ್ಪಿನ ಕೊರತೆ ಎದುರಾಗಿಲ್ಲ. ಎಂದಿನಂತೆ ಉಪ್ಪಿನ ದರ ಕೂಡ ಸಾಮಾನ್ಯವಾಗಿಯೇ ಇದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಈ ರೀತಿಯ ತಪ್ಪು ಮಾಹಿತಿಗಳನ್ನು ನೀಡಿರುವುದು ನಿಜಕ್ಕೂ ಸರಿಯಲ್ಲ. ಉಪ್ಪು, ಅಕ್ಕಿ, ಸಕ್ಕರೆ, ಕಾಳುಬೇಳೆಗಳ ಬೆಲೆಯಲ್ಲಿ ಯಾವುದೇ ರೀತಿಯ ಕೊರತೆಗಳಿಲ್ಲ. ಜನತೆಯಲ್ಲಿ ಭಯವನ್ನು ಹುಟ್ಟಿಸಿರುತ್ತಿರುವವರ ವಿರುದ್ಧ ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಕೂಡಲೇ ಕ್ರಮಕೈಗೊಳ್ಳಬೇಕಿದೆ. ಅಲ್ಲದೆ, ಉಪ್ಪನ್ನು ಕೆಜಿಗೆ ರೂ.200ಕ್ಕೆ ಮಾರಾಟ ಮಾಡಿದ ಅಂಗಡಿ ಮಾಲೀಕರ ವಿರುದ್ಧವೂ ಅಲ್ಲಿನ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.