ಕರ್ನಾಟಕಕ್ಕೆ ಮತ್ತೆ ಕಾದಿದೆಯಾ ಗಂಡಾಂತರ.?

By Web DeskFirst Published Oct 8, 2018, 10:40 AM IST
Highlights

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿದ್ದರೂ ಅದು ಸಮುದ್ರದ ಮೇಲೇ ಹೆಚ್ಚಿನ ಪ್ರಭಾವ ಹೊಂದಿರುವುದರಿಂದ ಭೂ ಭಾಗದ ಮೇಲೆ ಹೆಚ್ಚಿನ ಮಳೆಯಾಗುವುದಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಬೆಂಗಳೂರು :  ವಾಯುಭಾರ ಕುಸಿತದ ಪ್ರಭಾವ ಸಮುದ್ರದ ಮೇಲೆ ಹೆಚ್ಚಾಗಿರುವುದರಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿದ್ದರೂ ಅದು ಸಮುದ್ರದ ಮೇಲೇ ಹೆಚ್ಚಿನ ಪ್ರಭಾವ ಹೊಂದಿರುವುದರಿಂದ ಭೂ ಭಾಗದ ಮೇಲೆ ಹೆಚ್ಚಿನ ಮಳೆಯಾಗುವುದಿಲ್ಲ. ಆರಂಭದಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳು ಕಂಡು ಬಂದಿತ್ತಾದರೂ ಬದಲಾದ ವಾಯುಗುಣದಿಂದ ಮಾರುತಗಳ ದಿಕ್ಕು ಬದಲಾಗಿದೆ. ಹಾಗಾಗಿ, ಮಳೆಯ ನಿರೀಕ್ಷೆ ಕಡಿಮೆಯಾಗಿದೆ.

ಆದರೂ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿಯ ಕೆಲ ಭಾಗದಲ್ಲಿ ಎರಡ್ಮೂರು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಿಸಿಲಿನ ಪ್ರಮಾಣ ಹೆಚ್ಚಾಗಿರುವುದರಿಂದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್‌ ರೆಡ್ಡಿ ತಿಳಿಸಿದ್ದಾರೆ.

click me!