
ಬೆಂಗಳೂರು : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಇಬ್ಬರು ಸಂಸದರಿಗೆ ಮಾತ್ರ ಟಿಕೆಟ್ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಮೊದಲ ಪಟ್ಟಿಯಲ್ಲಿ ಶಿವಮೊಗ್ಗ ಸಂಸದರಾಗಿರುವ ಯಡಿಯೂರಪ್ಪ ಅವರಿಗೆ ಶಿಕಾರಿಪುರದಿಂದ ಮತ್ತು ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಅವರಿಗೆ ಮೊಳಕಾಲ್ಮುರು ಕ್ಷೇತ್ರದಿಂದ ಟಿಕೆಟ್ ಘೋಷಿಸಲಾಗಿದೆ. ಈ ನಡುವ ಕೊಪ್ಪಳ ಸಂಸದ ಕರಡಿ ಸಂಗಣ್ಣ ಮತ್ತಿತರರೂ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸಂಸದನಾಗಿರುವ ನಾನು ಮತ್ತು ಶ್ರೀರಾಮುಲು ಅವರಿಗೆ ಮಾತ್ರ ಟಿಕೆಟ್ ನೀಡುವ ಬಗ್ಗೆ ಹಿಂದೆ ನಿರ್ಧಾರವಾಗಿತ್ತು. ಇನ್ನುಳಿದ ಯಾವುದೇ ಸಂಸದರಿಗೂ ಟಿಕೆಟ್ ನೀಡುವ ಪ್ರಸ್ತಾಪವಿಲ್ಲ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.