
ನವದೆಹಲಿ[ಮೇ.27]: ದೇಶದ ಜಸನಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲೇಬೇಕು ಎಂದು ಯೋಗಗುರು ಬಾಬಾ ರಾಮ್ ದೇವ್ ಪ್ರತಿಪಾದಿಸಿದ್ದಾರೆ. ಅಲ್ಲದೇ 'ಜನಸಂಖ್ಯೆಗೆ ಕಡಿವಾಣ ಹಾಕಲು ಕೇಂದ್ರ ಸರಕಾರ ಮೂರನೇ ಮಗುವಿಗೆ ಮತದಾನದ ಹಕ್ಕು ಹಾಗೂ ಸರ್ಕರಿ ಕೆಲಸವನ್ನು ನಿಷೇಧಿಸಬೇಕು' ಎಂದಿದ್ದಾರೆ.
ಈ ಕುರೊತಾಗಿ ಮಾತನಾಡಿದ ಬಾಬಾ ರಾಮ್ ದೇವ್ 'ಮುಂದಿನ 50 ವರ್ಷದಲ್ಲಿ ಭಾರತದ ಜನಸಂಖ್ಯೆ 150 ಕೋಟಿ ದಾಟಬಾರದು. ದಾಟಿದರೆ ಅದರಿಂದ ನೂರೆಂಟು ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ ಹಾಗೂ ದೇಶದ ಸಾಮಾಜಿಕ ಹಾಗೂ ಆರ್ಥಿಕ ವ್ಯವಸ್ಥೆ ಹಳ್ಳ ಹಿಡಿಯುತ್ತದೆ. ಹೀಗಾಗಿ ಯಾವುದೇ ದಂಪತಿ ಮೂರನೇ ಮಗುವನ್ನು ಹೊಂದಿದ್ದರೆ ಆ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೊಡಬಾರದು. ಶಿಕ್ಷಣ ಸೇರಿದಂತೆ ಯಾವುದೇ ಸರಕಾರಿ ಸೌಲಭ್ಯ ನೀಡಬಾರದು. ಇಂತಹ ಕಠಿಣ ಕ್ರಮ ಕೈಗೊಂಡರಷ್ಟೇ ಜನಸಂಖ್ಯೆ ನಿಯಂತ್ರಣ ಸಾಧ್ಯ. ಿನದನ್ನು ಎಲ್ಲಾ ಧರ್ಮದವರಿಗೂ ಅನ್ವಯವಾಗುವಂತೆ ಜಾರಿಗೊಳಿಸಬೇಕು' ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ದೇಶದೆಲ್ಲೆಡೆ ಗೋ ಹತ್ಯೆ ನಿಷೇಧಿಸಬೇಕು ಹಾಗೂ ಮದ್ಯ ಉತ್ಪಾದನೆ, ಖರೀದಿ ಹಾಗೂ ಮಾರಾಟವನ್ನೂ ನಿಷೇಧಿಸಬೇಕು. ಇದರಿಂದ ಸಮಾಜದ ಸ್ವಾಸ್ಥ್ಯ ಕಾಪಾಡಬಹುದು ಎಂದು ಬಾಬಾ ರಾಮ್ ದೇವ್ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.