
ಹೈದರಾಬಾದ್, [ಡಿ.21]: ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ.
ತೆಲಂಗಾಣದ ಎಐಎಂಐಎಂ ಮುಖಂಡ ಅಸಾದುದ್ದೀನ್ ಓವೈಸಿ ಅವರ ವಿರುದ್ಧ ಮಾನಹಾನಿಯುಂಟು ಮಾಡುವ ಹೇಳಿಕೆ ನೀಡಿದ್ದ ಆರೋಪ ಮೇಲೆ ದಿಗ್ವಿಜಯ್ ಸಿಂಗ್ ದೂರು ದಾಖಲಾಗಿತ್ತು.
ಅಸಾದುದ್ದೀನ್ ಓವೈಸಿ ಅವರು ಹಣಕ್ಕಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ್ದರು.
ಅದರ ವಿರುದ್ಧ ಓವೈಸಿ ಕೋರ್ಟ್ ಮೆಟ್ಟಿಲೇರಿದ್ದರು. ಈ ವಿಚಾರಣೆ ನಡೆಸಿದ ಹೈದರಾಬಾದ್‌ನ ನಾಂಪಲ್ಲಿಯ 8ನೇ ಎಸಿಎಂಎಂ ನ್ಯಾಯಾಲಯ ದಿಗ್ವಿಜಯ್ ಸಿಂಗ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ತಮ್ಮ ವಿರುದ್ಧದ ಮಾನನಷ್ಟ ಪ್ರಕರಣದ ವಿಚಾರಣೆಗೆ ದಿಗ್ವಿಜಯ್ ಸಿಂಗ್ ನಿರಂತರವಾಗಿ ಗೈರು ಹಾಜರಾಗಿದ್ದರು. ಹೀಗಾಗಿ ಅವರ ವಿರುದ್ಧ ವಾರಂಟ್ ಜಾರಿ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.