
ಬೆಂಗಳೂರು : ಕೇರಳದಲ್ಲಿ ಈಗಾಗಲೇ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಇದರಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕೇರಳದ 60 ಪ್ರವಾಸಿ ಪ್ರದೇಶಗಳು ಮಳೆಯಿಂದ ಬಂದ್ ಆಗಿವೆ. ಪ್ರಸಿದ್ಧ ಮುನ್ನಾರ್ ನತ್ತ ಪ್ರವಾಸ ಹೋಗೇಬೇಕೆಂದುಕೊಂಡಿದ್ದರೆ ಅದನ್ನು ನೀವು ನಿಲ್ಲಿಸುವುದು ಒಳಿತು.
ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಹಲವೆಡೆ ಭೂ ಕುಸಿತ ಸಂಭವಿಸಿದೆ.
ಭೂ ಕುಸಿತದಿಂದ ಹಲವು ರಸ್ತೆಗಳು ಬಂದ್ ಆಗಿವೆ. ಅನೇಕ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನೀವು ಈ ವೀಕೆಂಡ್ ನಲ್ಲಿ ಕೇರಳದತ್ತ ಹೋಗಬೇಕು ಎಂದು ಕೊಂಡಲ್ಲಿ ಅದನ್ನು ಮುಂದೂಡುವುದು ಒಳಿತು.
ಈಗಾಗಲೇ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. 27ಕ್ಕೂ ಅಧಿಕ ಮಂದಿ ಮಳೆಯಿಂದ ಪ್ರಾಣ ಕಳೆದುಕೊಂಡಿದ್ದು, ರಕ್ಷಣಾ ಪಡೆಗಳಿಂದ ಭರದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.