ಮೇಲ್ವರ್ಗ ಮೀಸಲು ದಾವೆ ಸಂವಿಧಾನ ಪೀಠಕ್ಕೆ ಈಗಲೇ ಇಲ್ಲ

By Web Desk  |  First Published Mar 12, 2019, 1:30 PM IST

ಮೇಲ್ವರ್ಗಗಳಲ್ಲಿರುವ ಬಡವರಿಗೆ ಕೇಂದ್ರ ಸರ್ಕಾರ ನೀಡಿರುವ ಶೇ.10ರಷ್ಟುಮೀಸಲಾತಿಯ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಈ ಹಂತದಲ್ಲಿ ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ. 


ನವದೆಹಲಿ (ಮಾ. 12): ಮೇಲ್ವರ್ಗಗಳಲ್ಲಿರುವ ಬಡವರಿಗೆ ಕೇಂದ್ರ ಸರ್ಕಾರ ನೀಡಿರುವ ಶೇ.10ರಷ್ಟುಮೀಸಲಾತಿಯ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಈ ಹಂತದಲ್ಲಿ ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ. ಅಲ್ಲದೆ, ಮಾರ್ಚ್  28 ರಂದು ಅರ್ಜಿಗಳ ವಿಚಾರಣೆ ನಡೆಸಿ ಅವುಗಳನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುವ ಬಗ್ಗೆ ನಿರ್ಧರಿಸುವುದಾಗಿ ಹೇಳಿದೆ.

4 ದಿನದಲ್ಲಿ 3 ನೇ ಕಾಂಗ್ರೆಸ್‌ ಶಾಸಕ ಪಕ್ಷಕ್ಕೆ ರಾಜೀನಾಮೆ!

Tap to resize

Latest Videos

ಮೇಲ್ವರ್ಗದ ಬಡವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ನೀಡಿರುವ ಮೀಸಲಾತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ, ಬಡತನವೊಂದೇ ಹಿಂದುಳಿಯುವಿಕೆಗೆ ಮಾನದಂಡವಲ್ಲ. ಹೀಗಾಗಿ ಕೇಂದ್ರ ಸರ್ಕಾರ ಅಂಗೀಕರಿಸಿರುವ ಸಂವಿಧಾನದ 103ನೇ ತಿದ್ದುಪಡಿಯನ್ನು ರದ್ದುಗೊಳಿಸಬೇಕು ಎಂದು ಕೋರಲಾಗಿದೆ. ಈ ಹಿಂದೆ ಕಾಯ್ದೆ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ್ದ ಸುಪ್ರೀಂಕೋರ್ಟ್‌, ಇದೀಗ ಅರ್ಜಿಯನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುವ ಬಗ್ಗೆ ಈಗಲೇ ನಿರ್ಧಾರ ಕೈಗೊಳ್ಳಲು ನಿರಾಕರಿಸಿದೆ.

click me!