ಸತೀಶ್ ಜಾರಕಿಹೊಳಿ ಹೇಳಿದ ಸ್ಫೋಟಕ ಸತ್ಯವೇನು..?

Published : Sep 14, 2018, 07:59 AM ISTUpdated : Sep 19, 2018, 09:25 AM IST
ಸತೀಶ್ ಜಾರಕಿಹೊಳಿ ಹೇಳಿದ ಸ್ಫೋಟಕ ಸತ್ಯವೇನು..?

ಸಾರಾಂಶ

ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ರೀತಿಯ ಬೆಳವಣಿಗೆಗಳಾಗುತ್ತಿದೆ. ಈ ಸಂಬಂಧ ಇದೀ ಪ್ರತಿಕ್ರಿಯಿಸಿದ ಸತೀರಶ್ ಜಾರಕಿಹೊಳಿ ಅವರು ಇದರಲ್ಲಿ ತಮ್ಮ ಪಾತ್ರವಿಲ್ಲ ಎಂದು ಹೇಳಿದ್ದಾರೆ. 

ಬೆಳಗಾವಿ  :  ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಲ್ಲಿ ನನ್ನ ಯಾವುದೇ ರೀತಿಯ ಪಾತ್ರವಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.  ಎಲ್ಲವೂ ಕೂಡ ರಮೇಶ್ ಜಾರಕಿಹೊಳಿ ಅವರದ್ದೇ ಎನ್ನುವ ವಿಚಾರವನ್ನು ಅವರು ತಿಳಿಸಿದ್ದಾರೆ.  ಆದ್ದರಿಂದ ಅವರನ್ನೇ ಈ ಸಂಬಂಧ ಪ್ರಶ್ನೆ ಮಾಡಿ ಎಂದು ಅವರು ಹೇಳಿದ್ದಾರೆ. 

ಇನ್ನು ಪಕ್ಷ ಎಂದಮೇಲೆ ಅಸಮಾಧಾನ ಎನ್ನುವುದು ಸಾಮಾನ್ಯ ಸಂಗತಿಯಾಗಿರುತ್ತದೆ. ಹಾಗೆಯೇ ನಮ್ಮಲ್ಲಿಯೂ ಕೂಡ ಸಮಸ್ಯೆ ಇದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಬಳಿಯಲ್ಲಿ ಮಾತನಾಡಿದ್ದೇವೆ, ಹಬ್ಬವೆಲ್ಲ ಮುಕ್ತಾಯವಾದ ನಂತರ ಮತ್ತೊಮ್ಮೆ ಮಾತುಕತೆ ನಡೆಸುವುದಾಗಿಯೂ ಅವರು ಹೇಳಿದ್ದಾರೆ.  

ಇನ್ನು ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಮೂರು ಜಿಲ್ಲೆ ಮಾಡುವ  ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಈ ವಿಚಾರ ಈಗಿನದ್ದಲ್ಲ. ಇದು ಅತ್ಯಂತ ಹಳೆಯ ವಿಚಾರವಾಗಿದೆ. ಕಳೆದ 20 ವರ್ಷಗಳಿಂದಲೂ ಕೂಡ ವಿಭಜನೆ ಬಗ್ಗೆ ಬೇಡಿಕೆ ಇದೆ. ಅದು ನಮ್ಮ ಬೇಡಿಕೆಯೂ ಕೂಡ ಹೌದು. 

ಆಪರೆಷನ ಕಮಲವೂ ಸರ್ಕಾರ ರಚನೆ ಆದಾಗಿನಿಂದಲೂ ಕೂಡ ಇದೆ. ನಮ್ಮ ಜಿಲ್ಲೆಯಲ್ಲಿ ಅಸಮಾಧಾನ ಇದೆ ಹೌದು. ಆದರೆ ಈ ಬಗ್ಗೆ ಬೇರೆಯವರು ತಲೆ ಹಾಕಬಾರದು ಎಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲೇ ದಾಖಲೆಯ ಚಳಿ, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಂಗಳೂರಿನಲ್ಲಿ ಮುಂದಿನ 1 ವಾರ ಹೇಗಿರಲಿದೆ?
Share Market: ರಿಲಯನ್ಸ್ ಷೇರಿನ ಹೆಸರಲ್ಲಿ ಬೆಂಗಳೂರು ಉದ್ಯಮಿಗೆ ₹8 ಕೋಟಿ ವಂಚನೆ!