ನೋಟಾ ಆಯ್ಕೆ ಸಂವಿಧಾನ ಬಾಹಿರ: ಕಾಂಗ್ರೆಸ್

By Suvarna Web DeskFirst Published Aug 1, 2017, 6:59 PM IST
Highlights

ರಾಜ್ಯಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗವು ನೋಟಾ (None Of The Above-NOTA) ಆಯ್ಕೆಯನ್ನು ನೀಡುವಂತಿಲ್ಲ ಎಂದು ಕಾಂಗ್ರೆಸ್ ಇಂದು ಹೇಳಿದೆ. ರಾಜ್ಯಸಭೆ ಚುನಾವಣೆಯಲ್ಲಿ ನೋಟಾ ಆಯ್ಕೆ ಬಳಸುವುದಾದರೆ ಮೊದಲು ಸಾಂವಿಧಾನಿಕ ತಿದ್ದುಪಡಿಯ ಅಗತ್ಯವಿದೆ. ಇಲ್ಲದಿದ್ದರೆ, ಅದು ಸಂವಿಧಾನ ಪರಿಚ್ಚೇದ-84ರ ಉಲ್ಲಂಘನೆಯಾಗುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ನವದೆಹಲಿ: ರಾಜ್ಯಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗವು ನೋಟಾ (None Of The Above-NOTA) ಆಯ್ಕೆಯನ್ನು ನೀಡುವಂತಿಲ್ಲ ಎಂದು ಕಾಂಗ್ರೆಸ್ ಇಂದು ಹೇಳಿದೆ.

ರಾಜ್ಯಸಭೆ ಚುನಾವಣೆಯಲ್ಲಿ ನೋಟಾ ಆಯ್ಕೆ ಬಳಸುವುದಾದರೆ ಮೊದಲು ಸಾಂವಿಧಾನಿಕ ತಿದ್ದುಪಡಿಯ ಅಗತ್ಯವಿದೆ. ಇಲ್ಲದಿದ್ದರೆ, ಅದು ಸಂವಿಧಾನ ಪರಿಚ್ಚೇದ-84ರ ಉಲ್ಲಂಘನೆಯಾಗುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಚುನಾವಣಾ ಆಯುಕ್ತರನ್ನು ಭೇಟಿಯಾದ ಬಳಿಕ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಆನಂದ್ ಶರ್ಮಾ, ಚುನಾವಣೆಯ ಪಾವಿತ್ರ್ಯತೆಯನ್ನು ಎತ್ತಿ ಹಿಡಿಯುವುದು ಬಹಳ ಮುಖ್ಯ. ಶಾಸಕರಿಗೆ ನೋಟಾ ಆಯ್ಕೆಯನ್ನು ನೀಡುವುದು ಸಂವಿಧಾನದ ಪರಿಚ್ಚೇಧ-84ರ ಉಲ್ಲಂಘನೆಯಾಗುತ್ತದೆ. ನೋಟಾ ಆಯ್ಕೆಯು ಕೇವಲ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಿಗೆ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಇನ್ನೋರ್ವ ನಾಯಕ ಮನೀಶ್ ತಿವಾರಿ ಕೂಡಾ ಅದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನೋಟಾ ಆಯ್ಕೆಯನ್ನು ತೆಗೆದು ಹಾಕಲು ಚುನಾವಣಾ ಆಯುಕ್ತರಿಗೆ ಮನವಿ ಮಾಡಲಾಗಿದೆ ಎಂದು ತಿವಾರಿ ಹೇಳಿದ್ದಾರೆ.

ಗುಜರಾತಿನಲ್ಲಿ ರಾಜ್ಯಸಭೆಗೆ ಚುನಾವಣೆ ನಡೆಯಲಿದ್ದು, ಇದೇ ಮೊದಲ ಬಾರಿಗೆ ನೋಟಾ ಆಯ್ಕೆಯನ್ನು ಪರಿಚಯಿಸಲಾಗಿದೆ.

click me!