
ಕೋಲ್ಕತ್ತಾದ ಫಾಶ್ ಗಾಲ್ಫ್ ಗ್ರೀನ್ ಏರಿಯಾದ ಕಸದ ತೊಟ್ಟಿಯಲ್ಲಿ 500 ಹಾಗೂ ಸಾವಿರ ಮುಖಬೆಲೆಯ ನೋಟುಗಳು ಪತ್ತೆಯಾಗಿವೆ. ಕಸದ ತೊಟ್ಟಿಯ ಸಮೀಪ ಆಟವಾಡುತ್ತಿದ್ದ ಮಕ್ಕಳಿಗೆ ಎರಡು ಚೀಲದಲ್ಲಿದ್ದ ಹರಿದ ನೋಟುಗಳಿರುವುದು ಕಂಡು ಬಂದಿದೆ. ಕೂಡಲೇ ಮಕ್ಕಳು ಪೋಷಕರಿಗೆ ವಿಷಯ ತಿಳಿಸಿದ್ದು, ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ನೋಟುಗಳನ್ನು ಕೇವಲ ಕೈಯಿಂದ ಹರಿದಿಲ್ಲ. ಕತ್ತರಿಯನ್ನು ಬಳಸಿ ಕತ್ತರಿಸಲಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಈ ಎಲ್ಲಾ ನೋಟುಗಳನ್ನು ವಶಕ್ಕೆ ಪಡೆದಿದ್ದು, ಪರಿಶೀಲನೆಗೆ ಕಳುಹಿಸಿದ್ದಾರೆ. ವಶಕ್ಕೆ ಪಡೆದ ನೋಟುಗಳ ಮೊತ್ತ 2ರಿಂದ 3 ಕೋಟಿ ಇರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.