
ಬೆಂಗಳೂರು(ಸೆ.20): ನಗರದ ಸಂಪಿಗೆ ರಸ್ತೆಯ ಮಂತ್ರಿಮಾಲ್ ಮತ್ತು ಮೆಜೆಸ್ಟಿಕ್ ನಡುವಿನ ಮೆಟ್ರೋ ರೈಲು ಮಾರ್ಗ ನಿರ್ಮಾಣ ಕಾಮಕಾರಿ ಪೂರ್ಣಗೊಂಡಿದ್ದರೂ, ಸಂಚಾರ ಆರಂಭಿಸಲು ವಿಳಂಬ ಮಾಡುತ್ತಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮಂತ್ರಿಮಾಲ್ -ಮೆಜೆಸ್ಟಿಕ್ ಮೆಟ್ರೋ ರೈಲು ಮಾರ್ಗದಲ್ಲಿ ಶೀಘ್ರ ಸಂಚಾರ ಪ್ರಾರಂಭ ಮಾಡುವಂತೆ ಮೆಟ್ರೋ ನಿಗಮಕ್ಕೆ ನಿರ್ದೇಶಿಸುವಂತೆ ವಕೀಲ ಎ.ವಿ.ಅಮರ್‌ನಾಥ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ರವಿ ಮಳಿಮಠ ಅವರಿದ್ದ ಪೀಠ ನೋಟಿಸ್ ಜಾರಿ ಮಾಡಿದೆ.
ಈ ಮಾರ್ಗದಲ್ಲಿ ಈಗಾಗಲೇ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಆದರೆ, ಉದ್ಘಾಟನೆಗೆ ಖರ್ಚಾಗುವ ಹಣ ಉಳಿಸುವ ಉದ್ದೇಶದಿಂದ ವರ್ಷಾಂತ್ಯಕ್ಕೆ ಆರಂಭವಾಗಲಿರುವ ದಕ್ಷಿಣ ಭಾಗದ ಮೆಟ್ರೋ ರೈಲು ಮಾರ್ಗದ ಉದ್ಘಾಟನೆ ವೇಳೆಯೇ ಈ ಮಂತ್ರಿಮಾಲ್-ಮೆಜೆಸ್ಟಿಕ್ ನಡುವಿನ ರೈಲು ಮಾರ್ಗವನ್ನೂ ಆರಂಭಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. ಕಾಮಗಾರಿಗೆ ಸಾವಿರಾರು ಕೋಟಿ ರು. ವ್ಯಯಿಸಿರುವ ಮೆಟ್ರೋ ನಿಗಮವು ಕೇವಲ ಉದ್ಘಾಟನೆ ವೆಚ್ಚ ಉಳಿಸುವ ಕಾರಣಕ್ಕಾಗಿ ಕಾಮಗಾರಿ ಪೂರ್ಣಗೊಂಡಿರುವ ರೈಲು ಮಾರ್ಗ ಸಂಚಾರಕ್ಕೆ ಮುಕ್ತಗೊಳಿಸುವುದಕ್ಕೆ ಹಿಂದೇಟು ಹಾಕಿತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.