
ಧಾರವಾಡ: ಕಾಂಗ್ರೆಸ್ ಪಕ್ಷದಲ್ಲಿ ಹೆಣ್ಣು ಮಕ್ಕಳನ್ನು ಸಪ್ಲೈ ಮಾಡಿದವರಿಗೆ ವಿಶೇಷ ಆತಿಥ್ಯವಿದೆ ಎಂಬ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪಿ.ಎಚ್. ನಿರಲಕೇರಿಗೆ ಪಕ್ಷದ ವರಿಷ್ಠರಿಂದ ಸ್ಪಷ್ಟೀಕರಣ ನೀಡಲು ಶೋಕಾಶ್ ನೋಟಿಸ್ ಜಾರಿ ಮಾಡಲಾಗಿದೆ.
ಮೂರು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಲು ನೋಟಿಸಲ್ಲಿ ತಾಕೀತು ಮಾಡಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರರಿಂದ ನೋಟಿಸ್ ಜಾರಿಯಾಗಿದೆ.
ಪಿ.ಎಚ್. ನಿರಲಕೇರಿ ಹಿರಿಯ ನ್ಯಾಯವಾದಿ ಮತ್ತು ಕಾಂಗ್ರೆಸ್ ಪಕ್ಷದ ಧಾರವಾಡ ನಾಯಕರಾಗಿದ್ದು, ಏಪ್ರಿಲ್ 3 ರಂದು ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದ ಒಳಗೆ ಪ್ರವೇಶ ನೀಡದ ಹಿನ್ನಲೆಯಲ್ಲಿ ಅಸಮಾಧಾನ ಹೊರಹಾಕಿದ ನಿರಲಕೇರಿ, ನಾಲ್ಕು ಜನ ಚೇಲಾಗಳನ್ನು, ಹೆಂಗಸರನ್ನು ಸಪ್ಲೈ ಮಾಡುವರಿಗೆ ಮಾತ್ರ ಕಾಂಗ್ರೆಸ್’ ನಲ್ಲಿ ಆದ್ಯತೆ ಎಂದಿದ್ದರು.
ಪಕ್ಷದ ಸಂಘಟನೆ ಇವರಿಂದಲೇ ಆಗುತ್ತದೆಯಾ ಎಂದು ಪ್ರಶ್ನೆ ಮಾಡಿದ್ದು, ಕಾಂಗ್ರೆಸ್ ನಾಯಕರಿಗೆ ನಾಚಿಗೆಯಾಗಬೆಂಕೆಂದು ಅಸಮದಾನ ವ್ಯಕ್ತಪಡಿಸಿದ್ದರು. ಈ ನಿಟ್ಟಿನಲ್ಲಿ ಇದೀಗ ನೋಟಿಸ್ ಜಾರಿ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.