
ನವದೆಹಲಿ: ಬಾಂಗ್ಲಾದೇಶದ ಅಕ್ರಮ ವಲಸಿಗರ ಉಪಟಳ ಎದುರಿಸುತ್ತಿರುವ ಅಸ್ಸಾಂನಲ್ಲಿ ಅಕ್ರಮವಾಸಿಗಳನ್ನು ಗುರುತಿಸಲು ಅಲ್ಲಿನ ಸರ್ಕಾರ ಕೈಗೊಂಡಿರುವ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ) ಕುರಿತು ದನಿ ಎತ್ತುತ್ತಿರುವ ಕಾಂಗ್ರೆಸ್ ಹಾಗೂ ತೃಣಮೂಲ ಕಾಂಗ್ರೆಸ್ಸಿನ ಬಣ್ಣ ಬಯಲಾಗಿದೆ.
2006 ರಲ್ಲಿ ಅಸ್ಸಾಂ ವಿಧಾನಸಭೆ ಚುನಾವಣೆ ಸಮರ ತಾರಕಕ್ಕೇರಿದ್ದಾಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಾಂಗ್ಲಾದೇಶದ ಅಕ್ರಮ ವಲಸಿಗರು ಅದರಲ್ಲೂ ಮುಸ್ಲಿಮರ ಮತ ಗಿಟ್ಟಿಸುವ ಸಲುವಾಗಿ ವಿದೇಶಿಗರ ಕಾಯ್ದೆಗೆ ತಿದ್ದುಪಡಿ ತಂದು ವಲಸಿಗರ ಗಡೀಪಾರು ತಪ್ಪಿಸುವುದಾಗಿ ಭರವಸೆ ನೀಡಿದ್ದ ಸಂಗತಿ ಬೆಳಕಿಗೆ ಬಂದಿದೆ.
ಕೋಲ್ಕತಾದಲ್ಲಿನ ಅಮೆರಿಕ ಕಾನ್ಸುಲೇಟ್ ಅಧಿಕಾರಿಯೊಬ್ಬರು 2006 ರ ಫೆ.16 ರಂದು ತಮ್ಮ ಸರ್ಕಾರಕ್ಕೆ ಈ ಕುರಿತು ಕಳುಹಿಸಿದ್ದ ಮಾಹಿತಿ ವಿಕಿಲೀಕ್ಸ್ ಕೇಬಲ್‌ನಲ್ಲಿದೆ. ಆದರೆ ಈಗ ಕಾಂಗ್ರೆಸ್ ಆ ಬಗ್ಗೆ ಸೊಲ್ಲೆತ್ತುತ್ತಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.