
ನವದೆಹಲಿ[ಆ.31]: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ 5 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ನೃಪೇಂದ್ರ ಮಿಶ್ರಾ ಅವರು ಪ್ರಧಾನಿ ಕಚೇರಿ ತ್ಯಜಿಸಲು ನಿರ್ಧರಿಸಿದ್ದಾರೆ. ಆದರೆ, ಎರಡು ವಾರಗಳ ಕಾಲ ಹುದ್ದೆಯಲ್ಲಿ ಮುಂದುವರಿಯುವಂತೆ ಮೋದಿ ಅವರು ಮಿಶ್ರಾಗೆ ಸೂಚಿಸಿದ್ದಾರೆ.
ಇದೇ ವೇಳೆ ಮಿಶ್ರಾ ಅವರಿಂದ ಹುದ್ದೆ ತೆರವಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಂಪುಟ ಕಾರ್ಯದರ್ಶಿ ಪಿ.ಕೆ. ಸಿನ್ಹಾ ಅವರನ್ನು ವಿಶೇಷ ಕರ್ತವ್ಯ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ಪ್ರಧಾನಿ ಕಚೇರಿಯ ವಕ್ತಾರ ಸಿತಾಂಶುಕರ್ ಮಾಹಿತಿ ನೀಡಿದ್ದಾರೆ. ಮಿಶ್ರಾ ಅವರು 2014ರಿಂದ ಪ್ರಧಾನಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
‘1967ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ಮಿಶ್ರಾ ಅತ್ಯಂತ ದಕ್ಷ ಅಧಿಕಾರಿಗಳ ಪೈಕಿ ಒಬ್ಬರಾಗಿದ್ದರು. 2014ರಲ್ಲಿ ದೆಹಲಿಗೆ ನಾನು ಹೊಸಬನಾಗಿದ್ದಾಗ ಮಿಶ್ರಾ ಅವರು ನನಗೆ ಸಾಕಷ್ಟುಸಂಗತಿಗಳನ್ನು ತಿಳಿಸಿಕೊಟ್ಟಿದ್ದರು ಮತ್ತು ಅವರ ಮಾರ್ಗದರ್ಶನಗಳು ಅತ್ಯಂತ ಮೌಲ್ಯಯುತವಾದದ್ದಾಗಿವೆ. ಮಿಶ್ರಾ ಅವರ ಬದುಕಿನ ಹೊಸ ಅಧ್ಯಾಯಕ್ಕೆ ಶುಭ ಹಾರೈಕೆಗಳು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.