ಬದಲಾಗದ ಸರ್ಜಿಕಲ್ ದಾಳಿ ಮಾಸ್ಟರ್ ಮೈಂಡ್ ಅಜಿತ್ ದೋವಲ್ ಸ್ಥಾನ

Published : Jun 03, 2019, 05:29 PM ISTUpdated : Jun 03, 2019, 05:39 PM IST
ಬದಲಾಗದ ಸರ್ಜಿಕಲ್ ದಾಳಿ ಮಾಸ್ಟರ್ ಮೈಂಡ್ ಅಜಿತ್ ದೋವಲ್ ಸ್ಥಾನ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಪ್ತ ಎಂದೇ ಗುರುತಿಸಿಕೊಂಡಿರುವ ಅಜಿತ್ ದೋವಲ್ ಮತ್ತೊಂದು ಅವಧಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ನೇಮಕವಾಗಿದ್ದಾರೆ.

ನವದೆಹಲಿ[ಜೂ. 03] ಭಾರತ ಸರಕಾರ ಸೋಮವಾರ ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಪುನರ್ ನೇಮಕ ಮಾಡಿದೆ. ದೋವೆಲ್ ಅವರಿಗೆ ರಾಜ್ಯ ಖಾತೆ ಸಚಿವರ ಮಾನ್ಯತೆ ನೀಡಲಾಗಿದೆ. ಮುಂದೆ 5 ವರ್ಷಗಳ ಕಾಲ ದೋವಲ್ ಕಾರ್ಯನಿರ್ವಹಿಸಲಿದ್ದಾರೆ. 

ಮೋದಿ ಅವಧಿಯಲ್ಲೇ ಮೊದಲ ಸರ್ಜಿಕಲ್ ಸ್ಟ್ರೈಕ್: ಸೇನಾಧಿಕಾರಿಯ ಅಧಿಕೃತ ಹೇಳಿಕೆ

ಉಗ್ರರ ಹುಟ್ಟು ಅಡಗಿಸಿದ ಬಾಲಾಕೋಟ್ ಹಾಗೂ 2016 ರ ಸರ್ಜಿಕಲ್ ಸ್ಟ್ರೈಕ್ ನ ಮಾಸ್ಟರ್ ಮೈಂಡ್ ಅಜಿತ್ ದೋವಲ್ 2014 ರಿಂದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ.

1968 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ದೋವಲ್ ಗುಪ್ತಚರ ವಿಭಾಗದಲ್ಲಿ ಹಲವು ವರ್ಷ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದು ಕ್ಯಾಬಿನೆಟ್ ದರ್ಜೆ ಸ್ಥಾನ ಮಾನದಲ್ಲಿ ಮುಂದುವರಿಯಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!