
ನವದೆಹಲಿ (ಡಿ. 26): ರಾಷ್ಟ್ರ ರಾಜಧಾನಿಯಲ್ಲಿ ನಿರಂತರ 4ನೇ ದಿನವೂ ವಾಯುಗುಣಮಟ್ಟ‘ಗಂಭೀರ’ ಪ್ರಮಾಣದಲ್ಲೇ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಸಮ-ಬೆಸ ವಾಹನ ಸಂಚಾರ ವ್ಯವಸ್ಥೆ ಮತ್ತೆ ಆರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ರಾಜಧಾನಿಯಲ್ಲಿ ಮಂಗಳವಾರ ವಾಯುಗುಣಮಟ್ಟ ಸೂಚ್ಯಂಕ 416 ದಾಖಲಿಸಿತು. ಇದು ಗಂಭೀರ ಪ್ರಮಾಣದ ಸಂಕೇತ.
ಈ ಹಿನ್ನೆಲೆಯಲ್ಲಿ ಮಾತನಾಡಿದ ಕೇಜ್ರಿವಾಲ್, ‘ದಿಲ್ಲಿಯಲ್ಲಿ ವಾಯುಮಾಲಿನ್ಯ ತಡೆಗಾಗಿ ವೃಕ್ಷಗಳನ್ನು ನೆಡಲಾಗಿದೆ. ಸಾರ್ವಜನಿಕ ಸಾರಿಗೆಯನ್ನು ಪ್ರಚುರಪಡಿಸಲು 3 ಸಾವಿರ ಬಸ್‌ಗಳನ್ನು ಖರೀದಿಸಲಾಗಿದೆ. ಮೆಟ್ರೋದ ಅತಿ ದೊಡ್ಡ ಹಂತಕ್ಕೆ ಅನುಮೋದನೆ ನೀಡಲಾಗಿದೆ. ಅಗತ್ಯ ಬಿದ್ದರೆ ಸಮ-ಬೆಸ ಸಂಚಾರ ವ್ಯವಸ್ಥೆಯನ್ನು ಪುನಃ ಜಾರಿಗೆ ತರುತ್ತೇವೆ. ಪ್ರತಿ ವ್ಯಕ್ತಿ ಕೂಡ ಜವಾಬ್ದಾರಿ ತೆಗೆದುಕೊಳ್ಳಬೇಕು’ ಎಂದರು.
ಈ ಹಿಂದೆ 2016ರಲ್ಲಿ ಸಮ-ಬೆಸ ಸಂಚಾರ ವ್ಯವಸ್ಥೆ ಕೆಲವು ದಿನಗಳ ಮಟ್ಟಿಗೆ ಜಾರಿಯಲ್ಲಿತ್ತು. ಸಮಸಂಖ್ಯೆಯಿಂದ ಅಂತ್ಯವಾಗುವ ನಂಬರ್‌ಪ್ಲೇಟ್ ಉಳ್ಳ ವಾಹನಗಳು ಸಮಸಂಖ್ಯೆಯ ದಿನಾಂಕದಂದು ಹಾಗೂ ಬೆಸಸಂಖ್ಯೆಯಿಂದ ಅಂತ್ಯವಾಗುವ ನಂಬರ್‌ಪ್ಲೇಟ್ ಉಳ್ಳ ವಾಹನಗಳು ಬೆಸಸಂಖ್ಯೆಯ ದಿನಾಂಕದಂದು ಸಂಚರಿಸಬೇಕು ಎಂಬುದೇ ಸಮ-ಬೆಸ ನಿಯಮ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.