
ಮಾಲೂರು (ಆ. 07): ದಿಢೀರ್ ಕಾರ್ಯಾಚರಣೆ ನಡೆಸಿದ ಸ್ಥಳೀಯ ಪೊಲೀಸರು ವಿಚಿತ್ರ ಹೇರ್‌ಸ್ಟೈಲ್ ಮಾಡಿಸಿಕೊಂಡಿದ್ದ ಹಾಗೂ ಗಡ್ಡಬಿಟ್ಟಿದ್ದ ಕೆಲ ಯುವಕರು ಮತ್ತು ಪೋಕರಿಗಳನ್ನು ಹಿಡಿದು, ತಲೆ ಬೋಳಿಸಿ ಕಳುಹಿಸಿದ ಘಟನೆ ಸೋಮವಾರ ನಡೆದಿದೆ.
ಕಳೆದ ಗುರುವಾರ ಪಟ್ಟಣದಲ್ಲಿ ನಡೆದ ವಿದ್ಯಾರ್ಥಿನಿ ರಕ್ಷಿತಾಳ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಪುಂಡ, ಪೋಕರಿಗಳ ವಿರುದ್ಧ ಕಾರ್ಯಾಚರಣೆ ನಡೆಸಿದ ಪೊಲೀಸರು, ವಿಚಿತ್ರ ಹೇರ್ ಸ್ಟೈಲ್ ಹೊಂದಿದ್ದ ಯುವಕರನ್ನು ಕರೆತಂದು ತಲೆ ಬೋಳಿಸಿ ಕಳುಹಿಸಿದ್ದಾರೆ. ಅಲ್ಲದೇ ಮತ್ತೆ ವಿಚಿತ್ರವಾಗಿ ಕೂದಲು ಬಿಟ್ಟುಕೊಂಡು ಓಡಾಡದಂತೆ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಇನ್ಸ್‌ಪೆಕ್ಟರ್ ಸತೀಶ್, ಯುವಕರಲ್ಲಿ ಶಿಸ್ತು ಹಾಗೂ ಕಾನೂನಿನ ಬಗ್ಗೆ ಭಯ ಇರಲಿ ಎಂಬ ಉದ್ದೇಶದಿಂದ ಈ ರೀತಿ ತಲೆ ಬೋಳಿಸಲಾಗಿದೆ. ಇದಕ್ಕೆ ಪೋಷಕರಿಂದಲೂ ಉತ್ತಮ ಸ್ಪಂದನೆ ಸಿಕ್ಕಿದೆ. ವೀಲ್ಹಿಂಗ್ ಮಾಡುತ್ತಿರುವವರ ವಿರುದ್ಧವೂ ಸಮರ ಸಾರಲಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ