ಭಾರತ್ ಬಂದ್ : ಓಲಾ, ಊಬರ್ ಸೇವೆ ಇರುತ್ತಾ..?

By Web Desk  |  First Published Jan 7, 2019, 11:32 AM IST

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜ.8 ಮತ್ತು 9 ರಂದು  ‘ಭಾರತ್ ಬಂದ್’ ಗೆ ಕರೆ ನೀವೆ. ಆದರೆ ಓಲಾ, ಊಬರ್ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. 


ಬೆಂಗಳೂರು : ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿ ಯು) ಜ.8 ಮತ್ತು 9 ರಂದು ಕರೆ ನೀಡಿರುವ ‘ಭಾರತ್ ಬಂದ್’ನಿಂದಾಗಿ ರಾಜ್ಯದಲ್ಲೂ ಕೆಲ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. 

ನಾಳೆ ಭಾರತ್ ಬಂದ್ : ಶಾಲಾ-ಕಾಲೇಜುಗಳಿಗೆ ಇರುತ್ತಾ ರಜೆ..?

Latest Videos

undefined

ಎಐಟಿಯುಸಿ, ಸಿಐಟಿಯು, ಎನ್ ಟಿಯುಸಿ, ಎಚ್‌ಎಂಎಸ್ ಸೇರಿದಂತೆ ರಾಷ್ಟ್ರಮಟ್ಟದ 11 ಸಂಘಟನೆಗಳು ಈ ಎರಡು ದಿನಗಳ ಕಾಲ ದೇಶವ್ಯಾಪ್ತಿ ಬಂದ್‌ಗೆ ಕರೆ ನೀಡಿದ್ದು, ರಾಜ್ಯದಲ್ಲಿ ಕೆಲ ಸಂಘಟನೆಗಳು ನೇರವಾಗಿ ಬಂದ್‌ನಲ್ಲಿ ಭಾಗವಹಿಸುತ್ತಿವೆ. 

ಭಾರತ ಬಂದ್ ಗೆ  ಖಾಸಗಿ ವಾಹನಗಳ ಸಂಘ ಬೆಂಬಲ ನೀಡಿದೆ. ಆದರೆ ಎಂದಿನಂತೆ  ಓಲಾ ಊಬರ್ ಕಾರ್ಯ ಮುಂದುವರಿಸಲಿವೆ.   ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೇವೆ ಮುಂದುವರಿಸುವ ಮೂಲಕ ಸಹಕರಿಸಲಿವೆ.  ಖಾಸಗಿ ವಾಹನಗಳ ಸಂಘಗಳ ಸಭೆಯಲ್ಲಿ ಈ ಬಗ್ಗೆ  ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. 

ನಾಳೆ, ನಾಡಿದ್ದು ಭಾರತ್ ಬಂದ್ : ಏನಿರುತ್ತೆ..? ಏನಿರಲ್ಲ..?

ಈ ಬಗ್ಗೆ ಓಲಾ ಊಬರ್ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ ಎಂದು ಅಸೋಸಿಯೇಷನ್ ಅಧ್ಯಕ್ಷ ತನ್ವಿರ್ ಸುವರ್ಣನ್ಯೂಸ್.ಕಾಮ್ ಗೆ ತಿಳಿಸಿದ್ದಾರೆ. 

click me!