
ನ್ಯೂಯಾರ್ಕ್(ಅ.17): ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಪರಿಶೀಲನೆಗಾಗಿ 2 ಗಂಟೆಗಳ ಕಾಲ ಕಾಯಿಸಿದ ಘಟನೆ ಅಮೆರಿಕದ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ಕುರಿತಂತೆ ಟ್ವಿಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಒಮರ್ ಅಬ್ದುಲ್ಲಾ , ಅಮೆರಿಕ ದೇಶಕ್ಕೆ ನಾನು ಇದು 3ನೇ ಬಾರಿ ಭೇಟಿ ನೀಡುತ್ತಿದ್ದು, ಮೂರನೇ ಬಾರಿ ಕೂಡ ನನಗೆ ಸಮಸ್ಯೆ ಎದುರಾಗಿದೆ.
ಅಮೆರಿಕ ವಿಮಾನ ನಿಲ್ದಾಣದಲ್ಲಿ 2 ಗಂಟೆಗಳ ಕಾಲ ಉಳಿಯಬೇಕಾಯಿತು. ವಿಮಾನ ನಿಲ್ದಾಣದಲ್ಲಿ ನಡೆಸಲಾಗುತ್ತಿರುವ ಹೆಚ್ಚುವರಿ ತಪಾಸಣೆ ಸಾಕಷ್ಟು ಬೇಸರವನ್ನುಂಟು ಮಾಡಿದೆ. ಪ್ರತೀ ಬಾರಿ ಅಮೆರಿಕ ದೇಶಕ್ಕೆ ಹೋದಾಗಲೆಲ್ಲಾ ನಾನು ಈ ಸಮಸ್ಯೆಯನ್ನು ಎದುರಿಸುತ್ತಿರುತ್ತೇನೆಂದು ಹೇಳಿದ್ದಾರೆ. ಎನ್ ವೈಯು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಅಮೆರಿಕಾಗೆ ಬಂದಿದ್ದೆ. ಆದರೆ, 2 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲೇ ವ್ಯರ್ಥವಾಗಿಯಿತು. ಇದರ ಬದಲು ಮನೆಯಲ್ಲಿಯೇ ಇರಬಹುದಿತ್ತು ಎಂದು ಹೇಳಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.