
ನವದೆಹಲಿ(ಸೆ.25): ಮಹತ್ವದ ಬೆಳವಣಿಗೆಯೊಂದರಲ್ಲಿ ಅಯೋಧ್ಯೆ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಶುಕ್ರವಾರ(ಸೆ.29) ಮಹತ್ವದ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಸ್ಲಿಮರು ನಮಾಜ್ ಮಾಡಲು ಮಸೀದಿಯೇ ಆಗಬೇಕೆ ಅಥವಾ ಎಲ್ಲಿ ಬೇಕಾದರೂ ನಮಾಜ್ ಮಾಡಬಹುದೇ ಎಂಬ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ತೀರ್ಪು ನೀಡಲಿದೆ. ಮಸೀದಿ ಇಸ್ಲಾಂ ಧರ್ಮದ ಬಹುಮುಖ್ಯ ಅಂಗ ಎಂಬುದರ ಕುರಿತು ಚರ್ಚೆ ನಡೆಯಲಿದೆ.
ಈ ತೀರ್ಪು ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಭವಿಷ್ಯದ ತೀರ್ಪುಗಳಿಗೆ ಪ್ರಭಾವ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರದ ತೀರ್ಪು ಭಾರೀ ಮಹತ್ವ ಪಡೆದುಕೊಂಡಿದೆ.
ಇನ್ನೊಂದು ವಿಶೇಷವೆಂದರೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಇದೇ (ಅ.2)ನಿವೃತ್ತಿ ಹೊಂದಲಿದ್ದು, ಅಂದು ಮಿಶ್ರಾ ಈಗಾಗಲೇ ತಮ್ಮ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಸಿದ್ದ 16 ಕೇಸಿನ ತೀರ್ಪು ಪ್ರಕಟಿಸಲಿದ್ದಾರೆ.
ಮುಖ್ಯವಾಗಿ ರಾಮ ಜನ್ಮಭೂಮಿ- ಬಾಬ್ರಿ ಮಸೀದಿ, ಉದ್ಯೋಗ ಬಡ್ತಿ ಮೀಸಲು, ಆಧಾರ್, ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ, ವ್ಯಭಿಚಾರವನ್ನು ಅಪರಾಧ ಎಂದು ಪರಿಗಣಿಸುವ ಸಂವಿಧಾನದ 497ನೇ ವಿಧಿ ರದ್ದು ಕೋರಿದ್ದ ಅರ್ಜಿ, ರಾಜ್ಯಗಳಿಗೂ ಆರ್‌ಟಿಐ ಕಾಯ್ದೆ ತಿದ್ದುಪಡಿ ಮಾಡಲು ಅವಕಾಶ, ಅಹಮದ್ ಪಟೇಲ್ ರಾಜ್ಯಸಭೆ ಚುನಾವಣೆ ಪ್ರಕರಣ, ರಾಘವೇಂದ್ರ ಸ್ವಾಮಿ ಮಠ ಮತ್ತು ಉತ್ತರಾಧಿ ಮಠ ನಡುವಿನ ಪ್ರಕರಣಗಳು ಕೂಡಾ ಸೇರಿವೆ.
ಪರಿಶುದ್ಧ ರಾಜಕೀಯಕ್ಕೆ ಇಂದು ಮುಹೂರ್ತ..?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.