
ವರ್ಧಾ(ಮಹಾರಾಷ್ಟ್ರ): ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ಆರಂಭದ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ನ ಪರಮೋಚ್ಛ ನೀತಿ-ನಿರೂಪಕ ಸಂಸ್ಥೆಯಾದ ಕಾರ್ಯಕಾರಿ ಸಮಿತಿ ಸಭೆ ವಾರ್ಧಾದಲ್ಲಿ ಇಂದು ನಡೆಯಲಿದೆ.
ಈ ಸಭೆಯಲ್ಲಿ ದೇಶಾದ್ಯಂತ ಹರಡಲಾಗಿರುವ ಭೀತಿಯ ವಾತಾವರಣ, ಹಿಂಸೆ, ದ್ವೇಷದ ವಾತಾವರಣದ ವಿರುದ್ಧ ಸ್ಪಷ್ಟ ಸಂದೇಶ ರವಾನಿಸಲಾಗುತ್ತದೆ ಎಂದು ಸೋಮವಾರ ಕಾಂಗ್ರೆಸ್ ಹೇಳಿದೆ. ಈ ಮೂಲಕ ಗಾಂಧೀಜಿ ಅವರ ಶಾಂತಿ ಸಂದೇಶವನ್ನು ಕಾಂಗ್ರೆಸ್ ರಾಷ್ಟ್ರಾದ್ಯಂತ ಪಸರಿಸಲಿದೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದರು.
ವಾರ್ಧಾದಲ್ಲಿರುವ ಸೇವಾಶ್ರಮದಲ್ಲಿ ನಡೆಯಲಿರುವ ಶಾಂತಿ ಮೆರವಣಿಗೆ ಮತ್ತು ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾಗವಹಿಸಲಿದ್ದಾರೆ. ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಕ್ವಿಟ್ ಇಂಡಿಯಾ ಚಳವಳಿ ಸೇರಿದಂತೆ ಹಲವು ಐತಿಹಾಸಿಕ ಕ್ಷಣಗಳಿಗೆ ಸೇವಾಗ್ರಾಮ ಸಾಕ್ಷಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.