
ಡೆಹ್ರಾಡೂನ್(ಜೂ.21): ಯೋಗ ನೂರಾರು ದೈಹಿಕ ಸಮಸ್ಯೆಗಳಿಗೆ ಮದ್ದಾಗಿದ್ದು, ಇದು ಎಲ್ಲರನ್ನೂ ಒಗ್ಗೂಡಿಸುವ ಶಕ್ತಿ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನ ಅಂಗವಾಗಿ ಉತ್ತರಾಖಂಡ್‌ನ ಡೆಹ್ರಾಡೂನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ 55 ಸಾವಿರಕ್ಕೂ ಹೆಚ್ಚು ಜನರೊಂದಿಗೆ ಇಂದು ಯೋಗಸಾನ ಮಾಡಿದರು.
ಇದಕ್ಕೂ ಮೊದಲು ಯೋಗದಿನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 'ಈ ವಿಶಾಲ ಹಾಗೂ ಸುಂದರ ಮೈದಾನದಲ್ಲಿರುವ ಎಲ್ಲರಿಗೂ ಹಾಗೂ ಎಲ್ಲಾ ಯೋಗ ಪ್ರೇಮಿಗಳಿಗೂ ನಾನು ದೈವ ಭೂಮಿ ಉತ್ತರಾಖಂಡ್ ನಿಂದ ನಾಲ್ಕನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯ ತಿಳಿಸುತ್ತೇನೆ' ಎಂದು ಹೇಳಿದರು.
'ತಾಯಿ ಗಂಗಾ ನೆಲೆಸಿರುವ ಈ ಭೂಮಿಯಲ್ಲಿ ಆದಿಶಂಕರಚಾರ್ಯ ಕಾಲಿಟ್ಟಿದ್ದಾರೆ. ಈ ಜಾಗ ವಿವೇಕಾನಂದ ಅವರಿಗೆ ಪ್ರೇರಣೆ ಮಾಡಿತ್ತು. ಅಂತಹ ಭೂಮಿಯಲ್ಲಿ ನಾವು ಯೋಗಕ್ಕಾಗಿ ಸೇರಿರುವುದು ಯಾವುದೇ ಸೌಭಾಗ್ಯಕ್ಕೆ ಕಡಿಮೆ ಇಲ್ಲ. ಉತ್ತರಾಖಂಡ್ ಹಲವಾರು ದಶಕಗಳಿಂದ ಯೋಗದ ಮುಖ್ಯ ಕೇಂದ್ರವಾಗಿದೆ. ಇಲ್ಲಿನ ಪರ್ವತಗಳು ಸ್ವತಃ ಯೋಗ ಹಾಗೂ ಆಯುರ್ವೇದಕ್ಕೆ ಪ್ರೇರಣೆ ನೀಡುತ್ತವೆ. ಸಾಮಾನ್ಯನಾಗಿರುವ ನಾಗರಿಕ ಈ ನೆಲಕ್ಕೆ ಕಾಲಿಟ್ಟೊಡನೆ ದಿವ್ಯ ಅನುಭವ ಆಗುತ್ತದೆ' ಎಂದು ಮೋದಿ ಹೇಳಿದರು.
'ಇದು ನಮ್ಮ ಎಲ್ಲ ಭಾರತೀಯರಿಗೆ ಗೌರವದ ಮಾತು. ಏಕೆಂದರೆ ಸೂರ್ಯ ಹುಟ್ಟುತ್ತಲೇ ತಮ್ಮ ಕಿರಣವನ್ನು ಎಲ್ಲೆಡೆ ಹರಡಿಸಿದ್ದಾನೆ. ವಿಶ್ವದಾದ್ಯಂತ ಎಲ್ಲರೂ ಸೂರ್ಯನನ್ನು ಯೋಗದ ಮೂಲಕ ಸ್ವಾಗತಿಸುತ್ತಿದ್ದಾರೆ. ಡೆಹ್ರಾಡೂನ್‍ನಿಂದ ಡಬ್ಲಿನ್ ವರೆಗೂ, ಶಾಂಘೈಯಿಂದ ಚಿಕಾಗೋವರೆಗೂ ಎಲ್ಲಾ ಕಡೆ ಯೋಗ ಮಾಡುತ್ತಿದ್ದಾರೆ. ವಿಶ್ವಸಂಸ್ಥೆ ಯೋಗಕ್ಕಾಗಿ ಪ್ರಸ್ತಾವನೆ ನೀಡಿದಾಗ ಎಲ್ಲ ದೇಶದವರೂ ಸಹಕಾರ ನೀಡಿದ್ದಾರೆ’ ಎಂದು ಪ್ರಧಾನಿ ಧನ್ಯವಾದ ಅರ್ಪಿಸಿದರು.
ಇನ್ನು ಪ್ರಧಾನಿ ಮೋದಿ ಪಾಲ್ಗೊಂಡಿರುವ ಡೆಹ್ರಾಡೂನ್ ಯೋಗ ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಮಂದಿ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ, ಸರ್ಕಾರ ಸುಮಾರು 50 ಸಾವಿರ ಯೋಗ ಮ್ಯಾಟ್ ಗಳನ್ನು ಪೂರೈಕೆ ಮಾಡಿದ್ದು, ಸುಮಾರು 5 ಸಾವಿರಕ್ಕೂ ಅಧಿಕ ಜನರ ಸ್ವಯಂ ಪ್ರೇರಿತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.