
ಚಿಕ್ಕಮಗಳೂರು(ಮಾ.05): ಪಶ್ಚಿಮಘಟ್ಟದ ಸೂಕ್ಷ್ಮ ಪರಿಸರ ಪ್ರದೇಶಗಳ ಬಗ್ಗೆ ಕಸ್ತೂರಿ ರಂಗನ್ ನೇತೃತ್ವದ ಸಮಿತಿ ನೀಡಿರುವ ವರದಿಗೆ ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ. ಇದು ಮಲೆನಾಡಿನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪಶ್ಚಿಮಘಟ್ಟ ಸಂರಕ್ಷಣೆಗೆ ಕಸ್ತೂರಿ ರಂಗನ್ ನೀಡಿರುವ ವರದಿ ಅವೈಜ್ಞಾನಿಕವಾಗಿದ್ದು, ಪರಿಸರ ಉಳಿಸುವ ನೆಪದಲ್ಲಿ ಆದಿವಾಸಿಗಳನ್ನು ಬೀದಿಪಾಲು ಮಾಡುವ ಹುನ್ನಾರ ನಡೆದಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕಸ್ತೂರಿ ರಂಗನ್ ವರದಿ ಸದ್ದು ಮಾಡ್ತಿದ್ದು, ಪರ ಮತ್ತು ವಿರೋಧದ ಚರ್ಚೆ ಶುರುವಾಗಿದೆ. ಜನರ ಭಾವನೆಗಳನ್ನ ಅರ್ಥ ಮಾಡಿಕೊಳ್ಳದೆ, ಅವರ ಬದುಕನ್ನು ಹಾಳು ಮಾಡುವ ವರದಿ ಎನ್ನುವುದು ಸಾರ್ವಜನಿಕರದ್ದು. ಬಗ್ಗೆ ಪಶ್ಚಿಮಘಟ್ಟದ ಸೂಕ್ಷ್ಮ ಪರಿಸರ ಪ್ರದೇಶಗಳ ಕಸ್ತೂರಿ ರಂಗನ್ ಸಮಿತಿ ನೀಡಿರುವ ವರದಿಯಲ್ಲಿ ಸೂಕ್ಷ್ಮ ಪ್ರದೇಶಗಳ ರಕ್ಷಣೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆ ಎನ್ನುವುದು ಪರಿಸರವಾದಿಗಳ ಅಭಿಪ್ರಾಯ. ಆದರೆ ಜನರು ಇದಕ್ಕೆ ವಿರೋಧ ವ್ಯಕ್ತಡಿಸುತ್ತಿದ್ದಾರೆ.
ದೇಶದ ಆರು ರಾಜ್ಯದ ಮೂಲಕ ಸಾಗಿರುವ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಲಕ್ಷಾಂತರ ಜನರು ವಾಸ ಮಾಡುತ್ತಿದ್ದಾರೆ. ಈ ಭಾಗದ ಲಕ್ಷಾಂತರ ಮಂದಿ ಕಾಡಿನ ಮರಗಳನ್ನು ನೆಚ್ಚಿ ಬದುಕಿಲ್ಲ. ಅಲ್ಲಿರುವ ಜೇನು, ಅಂಟುವಾಳದಂತಹ ಮೂಲಗಳನ್ನ ನೆಚ್ಚಿಕೊಂಡಿದ್ದಾರೆ. ಅಲ್ಲದೆ ಈ ಕಾಡುಗಳಲ್ಲಿರುವವರು ಪರಿಸರ ವಿರೋಧಿಗಳಲ್ಲ. ಇಲ್ಲಿ ವಾಸ ಮಾಡುತ್ತಿರುವುದರಿಂದಲೇಲೇ ಕಾಡು ರಕ್ಷಣೆಯಾಗುತ್ತಿರುವುದು. ಅಭಿವೃದ್ಧಿ ಹೊಂದುತ್ತಿರುವ ದೇಶಕ್ಕೆ ಈ ವರದಿ ಬೇಡ ಎನ್ನುವ ಅಭಿಪ್ರಾಯ ಜನರದ್ದು. ಆದರೆ ಈ ಬಗ್ಗೆ ಪರಿಸರವಾದಿಗಳು ಹೇಳುವುದೇ ಬೇರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಈಗಾಗಲೇ ಹುಲಿ ಯೋಜನೆ ಜನಸಾಮಾನ್ಯರಲ್ಲಿ ಭೀತಿ ಹುಟ್ಟಿಸಿದೆ. ಇದರ ಜೊತೆ ಕಸ್ತೂರಿರಂಗನ್ ವರದಿ ಜಾರಿಯಾಗುವ ಮಾತು ಕೇಳಿಬರುತ್ತಿರುವುದು ಮಲೆನಾಡಿಗರ ನಿದ್ದೆಗೆಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.