
ನ್ಯೂಜೆರ್ಸಿ(ಜೂ.17): ಅಮೆರಿಕದ ನ್ಯೂಜೆರ್ಸಿಯ ಟ್ರೇಂಟಾನ್ ನಲ್ಲಿ 24 ಗಂಟೆಯ ಅವಧಿಯ ಕಲಾ ಉತ್ಸವ ವೇಳೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದಾರೆ.
ಪೊಲೀಸರು ಶಂಕಿತನೊಬ್ಬನನ್ನು ಹತ್ಯೆ ಮಾಡಿದ್ದು, ಮತ್ತೊಬ್ಬನನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಗುಂಡಿನ ದಾಳಿಯಿಂದ ಗಾಯಗೊಂಡಿದ್ದ 20 ಜನರ ಪೈಕಿ 16 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 13 ವರ್ಷದ ಬಾಲಕ ಸೇರಿದಂತೆ ನಾಲ್ವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಕೌಂಟಿ ಪ್ರಾಸಿಕ್ಯೂಟರ್ ಏಂಜೆಲಾ ಒನೊಪ್ರಿ ಹೇಳಿದ್ದಾರೆ.
ಸ್ಥಳೀಯ ಕಲೆ, ಸಂಗೀತ ಹಾಗೂ ಆಹಾರವನ್ನು ಪರಿಚಯಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಕಲಾ ಉತ್ಸವದ ಮೇಲೆ ಇಬ್ಬರು ಶಂಕಿತರು ಗುಂಡಿನ ದಾಳಿ ನಡೆಸಿದ್ದಾರೆ. ಶಂಕಿತನೋರ್ವನನ್ನು ಹತ್ಯೆಗೈಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗುಂಡಿನ ದಾಳಿ ಆರಂಭವಾದಾಗ ಸುಮಾರು 1 ಸಾವಿರ ಜನರು ಸ್ಥಳದಲ್ಲಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ. ಗುಂಡಿನ ರಭಸಕ್ಕೆ ಕಲಾ ಉತ್ಸವದ ವೇದಿಕೆಯಲ್ಲಿನ ಗಾಜುಗಳು ಮತ್ತಿತರ ವಸ್ತುಗಳು ಒಡೆದು ಹೋಗಿವೆ ಎಂದು ಪ್ರತ್ಯೇಕ್ಷದರ್ಶಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.