ಒಂದು ಕುಟುಂಬಕ್ಕೆ ಒಂದು ಸರ್ಕಾರಿ ಉದ್ಯೋಗ!

Published : Nov 15, 2018, 09:37 AM IST
ಒಂದು ಕುಟುಂಬಕ್ಕೆ ಒಂದು ಸರ್ಕಾರಿ ಉದ್ಯೋಗ!

ಸಾರಾಂಶ

ಕುಟುಂಬಕ್ಕೆ ಹಣಕಾಸು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಇದೀಗ ಹೊಸ ಪ್ಲಾನ್ ಒಂದನ್ನು ಮಾಡಿಕೊಂಡಿದೆ. 

ಗ್ಯಾಂಗ್‌ಟಕ್‌: ಜನರಿಗೆ ಹಣಕಾಸು ಭದ್ರತೆ ಒದಗಿಸುವ ನಿಟ್ಟಿನಿಂದ ಒಂದು ಕುಟುಂಬಕ್ಕೆ ಒಂದು ಸರ್ಕಾರಿ ಉದ್ಯೋಗ ನೀಡುವ ಯೋಜನೆಯನ್ನು ಜಾರಿಗೊಳಿಸಲು ಸಿಕ್ಕಿಂ ಮುಖ್ಯಮಂತ್ರಿ ಪವನ್‌ ಕುಮಾರ್‌ ಚಾಮ್ಲಿಂಗ್‌ ಮುಂದಾಗಿದ್ದಾರೆ. 2018ರ ಡಿಸೆಂಬರ್‌ನಲ್ಲಿ ಈ ಸಂಬಂಧ ಅಧಿಸೂಚನೆ ಹೊರಡಿಸಲಾಗುವುದು. 2019ರ ಜ.2ರಿಂದ ಮೊದಲ ಸುತ್ತಿನ ಫಲಾನುಭವಿಗಳು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಚಾಮ್ಲಿಂಗ್‌ ಹೇಳಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳಿಗೆ ಸ್ಥಿರ ಆದಾಯ ದೊರಕಿಸಿಕೊಡಲು ಒಂದು ಕುಟುಂಬಕ್ಕೆ ಒಂದು ಉದ್ಯೋಗ ಎಂಬ ಐತಿಹಾಸಿಕ ನಿರ್ಧಾರವನ್ನು ನಾವು ಕೈಗೊಂಡಿದ್ದೇವೆ. ಸರ್ಕಾರ ಫಲಾನುಭವಿಗಳನ್ನು ಗುರುತಿಸಲು ಸಹಕರಿಸುವಂತೆ ಜನರಲ್ಲಿ ಮನವಿ ಮಾಡುತ್ತೇನೆ. ಇದರಿಂದ ಅರ್ಹ ಕುಟುಂಬ ಫಲಾನುಭವ ಪಡೆಯಲು ಸಾಧ್ಯವಾಗಲಿದೆ ಎಂದು ಫೇಸ್‌ಬುಕ್‌ ಪೋಸ್ಟ್‌ವೊಂದರಲ್ಲಿ ಚಾಮ್ಲಿಂಗ್‌ ಬರೆದು ಕೊಂಡಿದ್ದಾರೆ. ಒಂದು ವೇಳೆ ಯೋಜನೆ ಅನುಷ್ಠಾನಗೊಳಿಸುವಲ್ಲಿ ಯಾವುದೇ ತಾರತಮ್ಯ ಆಗಿರುವುದು ಕಂಡು ಬಂದರೆ ಅಥವಾ ಹಣದ ಬೇಡಿಕೆ ಇಟ್ಟರೆ ನೇರವಾಗಿ ತಮ್ಮ ಕಚೇರಿಗೆ ಮಾಹಿತಿ ನೀಡಬಹುದು ಎಂದು ಹೇಳಿದ್ದಾರೆ.

6 ಲಕ್ಷ ಜನ ಸಂಖ್ಯೆ ಹೊಂದಿರುವ ಸಿಕ್ಕಿಂನಲ್ಲಿ ಹಾಲಿ 37196 ಕಾಯಂ ಸರ್ಕಾರಿ ಅಧಿಕಾರಿಗಳು ಇದ್ದಾರೆ. ಇದನ್ನು ಹೊರತುಪಡಿಸಿ, ಹಂಗಾಮಿಯಾಗಿ ಸೇವೆ ಸಲ್ಲಿಸುತ್ತಿರುವವರು, ಹೋಮ್‌ಗಾರ್ಡ್‌, ಗೌರವ ಹುದ್ದೆಯಲ್ಲಿ ಇರುವವರು, ಸಾರ್ವಜನಿಕ ವಲಯದ ಉದ್ಯಮಗಳಲ್ಲಿನ ಸಿಬ್ಬಂದಿಯೂ ಸೇರಿದರೆ ಒಟ್ಟಾರೆ 70000 ಉದ್ಯೋಗಿಗಳು ಇದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: T20 World Cup 2026 - ಫೈನಲ್‌ ಟಿಕೆಟ್‌ಗಾಗಿ ಇಂದು ಕಿವೀಸ್‌ vs ದಕ್ಷಿಣ ಆಫ್ರಿಕಾ ಹೈವೋಲ್ಟೇಜ್ ಮ್ಯಾಚ್
Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ