
ಮೈಸೂರು[ಸೆ.27]: ಫೇಸ್‌ಬುಕ್‌ನಲ್ಲಿ ಸಮಾಜ ಸೇವಕಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯನ್ನು ಮೈಸೂರಿನ ಕೆ.ಆರ್. ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹುಣಸೂರು ತಾಲೂಕು ಕಲ್ಕುಣಿಕೆ ನಿವಾಸಿ ವಿ ಗೌಡ ಎಂಬವರೇ ಬಂಧಿತ ಆರೋಪಿ. ಇವರು ಕೆ.ಆರ್. ಮೊಹಲ್ಲಾದ ಮಹಿಳೆಯೊಂದಿಗೆ ಸ್‌ಬುಕ್‌ನಲ್ಲಿ ಪರಿಚಯವಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋವೊಂದನ್ನು ಮಹಿಳೆ ತಮ್ಮ ಫೇಸ್‌ಬುಕ್ ನಲ್ಲಿ ಶೇರ್ ಮಾಡಿದ್ದರು.
ಇದರ ಬಗ್ಗೆ ರವಿಗೌಡ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರವಿ ಗೌಡ ಕೆಲಸ ಮಾಡುತ್ತಿದ್ದ ಹೂಟಗಳ್ಳಿಯಲ್ಲಿರುವ ಕಾರ್ಖಾನೆ ಬಳಿ ತೆರಳಿದ ಮಹಿಳೆ, ಈ ಬಗ್ಗೆ ಪ್ರಶ್ನೆ ಮಾಡಿ, ರವಿ ಗೌಡನನ್ನು ಸಾರ್ವಜನಿಕರ ಸಹಾಯದಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.