
ಹಾಸನ : ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಈ ನಿಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿದೆ. ವಿವಿಧ ಮುಖಂಡರು ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದು, ಸ್ಥಾನ ಹಂಚಿಕೆ ನಿಟ್ಟಿನಲ್ಲಿ ಮುಖಂಡರು ತಯಾರಿ ನಡೆಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣಗೆ ಸಚಿವ ಸ್ಥಾನ ನೀಡಲಾಗಿದ್ದು, ಜಿಲ್ಲೆಗೆ ಮತ್ತೊಂದಯ ಸಚಿವ ಸ್ಥಾನ ನೀಡಲು ಆಗ್ರಹ ಕೇಳಿ ಬಂದಿದೆ.
ವಿವಿಧ ದಲಿತ ಸಂಘಟನೆಗಳಿಂದ ಒಕ್ಕೊರಲಿನಿಂದ ಆಗ್ರಹಿಸಿದ್ದು, ಆಲೂರು-ಸಕಲೇಶಪುರ ಮೀಸಲು ಕ್ಷೇತ್ರದ ಜೆಡಿಎಸ್ ಶಾಸಕ ಹೆಚ್.ಕೆ. ಕುಮಾರ ಸ್ವಾಮಿಗೆ ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ.
ಹಿರಿಯ ಶಾಸಕರಾದ ಹೆಚ್.ಕೆ.ಕುಮಾರಸ್ವಾಮಿ ಹಿಂದೆ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದು, ದಲಿತ ಹೋರಾಟದಿಂದ ಮೇಲೆ ಬಂದ ಸಜ್ಜನ ರಾಜಕಾರಣಿಯಾಗಿದ್ದಾರೆ.
ಒಟ್ಟು 6 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರಿಗೆ ಮಂತ್ರಿಯಾಗುವ ಅರ್ಹತೆ ಇದ್ದು, ಎನ್ ಮಹೇಶ್ ಅವರಿಂದ ತೆರವಾದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸ್ಥಾನವನ್ನು ನೀಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸಚಿವ ರೇವಣ್ಣಗೆ ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.