
ಬೆಂಗಳೂರು (ಜ. 14): ಬೆಂಗಳೂರಿನ ಪಿಜಿಯೊಂದರಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 15 ದಿನಗಳ ಹಿಂದೆ ನಡೆದಿರುವ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ದೆಹಲಿ ಮೂಲದ 21 ವರ್ಷದ ಯುವತಿಯ ಮೇಲೆ ಡಿ.31ರ ರಾತ್ರಿ ಆಕೆಯು ವಾಸವಿದ್ದ ಕೋರಮಂಗಲದ ಪಿಜಿಯಲ್ಲೇ ಲೈಂಗಿಕ ದೌರ್ಜನ್ಯ ನಡೆದಿದೆ. ಲಿಫ್ಟ್’ಗಾಗಿ ಕಾಯುತ್ತಿದ್ದ ವೇಳೆ ಕಾಮುಕನೊಬ್ಬ ಯುವತಿಯನ್ನು ಹಿಡಿದು ಎಳೆದಾಡಿದ್ದಾನೆ. ಭಯಗೊಂಡ ಯುವತಿ ಚೀರಿಕೊಂಡಾಗ ಆ ವ್ಯಕ್ತಿ ಮೊಬೈಲ್ ಕಸಿದು ಪರಾರಿಯಾಗಿದ್ದಾನೆ.
ಕೋರಮಂಗಲದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ 4 ತಿಂಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದಿದ್ದಳು. ಯುವತಿಯು ವಿವೇಕನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಐಪಿಸಿ ಸೆಕ್ಷನ್ 354, 363, 392, 511 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.