ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ

By Suvarna Web DeskFirst Published Feb 19, 2017, 4:07 AM IST
Highlights

ಸ್ಮಾರಕ ನಿರ್ಮಾಣ ಸಂಬಂಧ ಸರ್ಕಾರ 5 ಕೋಟಿ ರೂ. ಮಂಜೂರು ಮಾಡಿದ್ದು, ಈಗಾಗಲೇ 2 ಕೋಟಿ ರೂ. ಬಿಡುಗಡೆ ಮಾಡಿದೆ. 2016ರ ಡಿಸೆಂಬರ್‌ 6ರಿಂದ ಸ್ಮಾರಕ ನಿರ್ಮಾಣ ಕಾಮಗಾರಿ ಭರದಿಂದ ಸಾಗಿತ್ತು.

ಮೈಸೂರು (ಫೆ.19): ನಟ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದೆ. ಸ್ಮಾರಕ ನಿರ್ಮಿಸಲಾಗುತ್ತಿರುವ ಮೈಸೂರು ತಾಲೂಕಿನ ಹಾಲಾಳು ಗ್ರಾಮದ ಉದೂರು ಕ್ರಾಸ್‌ ಬಳಿಯ ಭೂಮಿ, ತಮ್ಮ ಸ್ವಾಧೀನದಲ್ಲಿದೆ ಎಂದು ನಾಲ್ವರು ರೈತರು ತಕರಾರು ತೆಗೆದಿದ್ದಾರೆ.

ನಗರದ ಸಿವಿಲ್‌ ನ್ಯಾಯಾಲಯದಿಂದ ತಾತ್ಕಾಲಿಕ ಪ್ರತಿಬಂಧಕಾಜ್ಞೆ ತಂದಿದ್ದಾರೆ. ವಿಷ್ಣು ಸ್ಮಾರಕ ನಿರ್ಮಾಣಕ್ಕಾಗಿ ಗ್ರಾಮದ 5 ಎಕರೆ ಭೂಮಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಜಿಲ್ಲಾಡಳಿತ ಹಸ್ತಾಂತರಿಸಿದೆ.

ಸ್ಮಾರಕ ನಿರ್ಮಾಣ ಸಂಬಂಧ ಸರ್ಕಾರ 5 ಕೋಟಿ ರೂ. ಮಂಜೂರು ಮಾಡಿದ್ದು, ಈಗಾಗಲೇ 2 ಕೋಟಿ ರೂ. ಬಿಡುಗಡೆ ಮಾಡಿದೆ. 2016ರ ಡಿಸೆಂಬರ್‌ 6ರಿಂದ ಸ್ಮಾರಕ ನಿರ್ಮಾಣ ಕಾಮಗಾರಿ ಭರದಿಂದ ಸಾಗಿತ್ತು.

ಆದರೆ ಮೂವರು ರೈತರು ಕಳೆದ 10 ವರ್ಷಗಳಿಂದ ಈ ಭೂಮಿ ತಮ್ಮ ಸ್ವಾಧೀನದಲ್ಲಿದೆ ಎಂದು ವಾದಿಸುತ್ತಿದ್ದಾರೆ.

click me!