
ಬೆಂಗಳೂರು (ನ.09): ಜೆಡಿಎಸ್ ವರಿಷ್ಠ ದೇವೇಗೌಡರ ಕುಟುಂಬದಲ್ಲಿ ಟಿಕೆಟ್ ಗೊಂದಲ ಮುಂದುವರೆದಿದೆ. ಗೌಡರ ಕುಟುಂಬದಿಂದ ನಿಖಿಲ್, ಪ್ರಜ್ವಲ್ ಸ್ಪರ್ಧಿಸುತ್ತಾರೆ ಎಂಬ ವಿಚಾರದಲ್ಲಿ ಎಚ್ಡಿಕೆ ಪ್ರತಿಕ್ರಿಯಿಸಿದ್ದು ನಮ್ಮ ಕುಟುಂಬದಿಂದ ಇಬ್ಬರು ಮಾತ್ರ ಸ್ರರ್ಧೆ ಅಂತ ಮತ್ತೆ ಗೊಂದಲ ಸೃಷ್ಟಿಸಿದ್ದಾರೆ. ಇದೆಲ್ಲದರ ನಡುವೆ ಅಂತಿಮ ನಿರ್ಧಾರ ನನ್ನದೇ ಅಂತಿದ್ದಾರೆ ದೇವೇಗೌಡರು.
ಪ್ರಜ್ವಲ್ ರೇವಣ್ಣನಿಗೆ ಟಿಕೆಟ್ ನೀಡುವ ವಿಚಾರ ಭಾರೀ ಗೊಂದಲ ಸೃಷ್ಟಿಸುತ್ತಿದ್ದು ಪ್ರಜ್ವಲ್ ರೇವಣ್ಣ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಕನಸು ಭಗ್ನವಾದಂತೆ ಕಾಣುತ್ತಿದೆ. ಯಾಕಂದ್ರೆ ಗೌಡರ ಕುಟುಂಬದ ಟಿಕೆಟ್ ಗೊಂದಲಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ. 2018ರ ವಿಧಾನಸಭೆಗೆ ನಮ್ಮ ಕುಟುಂಬದಿಂದ ಇಬ್ಬರು ಮಾತ್ರ ಸ್ಪರ್ಧೆ ಮಾಡ್ತಾರೆ. ಪ್ರಜ್ವಲ್ ರೇವಣ್ಣ, ಅನಿತಾ ಕುಮಾರಸ್ವಾಮಿಗೆ ಈ ಬಾರಿ ಟಿಕೆಟ್ ಇಲ್ಲ ಅಂತ ಪುನರುಚ್ಚಿಸಿದ್ದಾರೆ. ಇನ್ನೂ ಪಕ್ಷದ ವರಿಷ್ಠ ದೇವೇಗೌಡರು ಪ್ರತಿಕ್ರಿಯಿಸಿದ್ದು ಈ ಬಗ್ಗೆ ಗೊಂದಲ, ಹೆಚ್ಚಿನ ಚರ್ಚೆ ಅನಾವಶ್ಯಕ. ಯಾರು ಸ್ಪರ್ಧಿಸಬೇಕೆಂಬ ಅಂತಿಮ ನಿರ್ಧಾರ ನಾನೇ ತೆಗೆದುಕೊಳ್ಳುವೆ ಅಂತ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.