
ಬೆಂಗಳೂರು : ಕಾಂಗ್ರೆಸ್ ವಿರುದ್ಧ ಇನ್ನೊಂದು ಚಾಜ್‌ರ್‍ಶೀಟ್ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಭಾನುವಾರ ಪಕ್ಷದ ಕಚೇರಿಯಲ್ಲಿ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಎಷ್ಟುಹೇಳಿದರೂ ಕಡಮೆಯೇ. ಈಗಾಗಲೇ ಬಿಬಿಎಂಪಿ ವ್ಯಾಪ್ತಿಯಲ್ಲಿನ ಅಕ್ರಮಗಳ ಬಗ್ಗೆ ಚಾಜ್‌ರ್‍ಶೀಟ್ ಬಿಡುಗಡೆ ಮಾಡಲಾಗಿದೆ. ಇನ್ನೊಂದು ಚಾಜ್‌ರ್‍ಶೀಟನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಾಗುವುದು ಎಂದರು.
13ಕ್ಕೆ ರಾಯಚೂರಿಗೆ ಮೋದಿ: ಇದೇ ತಿಂಗಳ 13ರಂದು ರಾಯಚೂರಿನಲ್ಲಿ ನಡೆಯುವ ಪಕ್ಷದ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲೂ ಸಮಾವೇಶವೊಂದನ್ನು ನಡೆಯಲಿದ್ದು, ಅದರಲ್ಲೂ ಮೋದಿ ಅವರು ಭಾಗವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.
ಈ ಮೊದಲು ರಾಯಚೂರಿನ ನಂತರ ಬೆಳಗಾವಿಯ ಸಮಾವೇಶಕ್ಕೆ ಮೋದಿ ಅವರನ್ನು ಕರೆಸಲು ನಿರ್ಧರಿಸಲಾಗಿತ್ತು. ಆದರೆ, ಇದೀಗ ಬೆಳಗಾವಿ ಬದಲು ಚಿಕ್ಕೋಡಿಯಲ್ಲಿ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಆ ಸಮಾವೇಶದ ದಿನಾಂಕ ನಿಗದಿಯಾಗಬೇಕಿದೆ ಎಂದರು.
ಶುಕ್ರವಾರದಿಂದ ಆರಂಭಗೊಂಡಿರುವ ಬೆಂಗಳೂರು ರಕ್ಷಿಸಿ ಪಾದಯಾತ್ರೆಯ ಸಮಾರೋಪ ಸಮಾರಂಭ ಈ ತಿಂಗಳ 15ರಂದು ನಡೆಯಲಿದೆ. ಈ ಸಮಾರಂಭದಲ್ಲಿ ಬಹುತೇಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಅದನ್ನು ಬಳಸಿಕೊಂಡು ಹೇಗೆ ಉತ್ಸಾಹಿತರಾಗಿ ಕೆಲಸ ಮಾಡಬೇಕು ಎಂಬುದನ್ನು ರಾಷ್ಟ್ರೀಯ ನಾಯಕರಾದ ಪ್ರಕಾಶ್ ಜಾವಡೇಕರ್, ಪಿಯೂಷ್ ಗೋಯಲ್, ಮುರಳೀಧರರಾವ್ ಅವರು ಕೋರ್ ಕಮಿಟಿ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಅದನ್ನು ಪಾಲಿಸುತ್ತೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.