
ತುಮಕೂರು (ಫೆ. 28): ಮಹಿಳೆಯೊಬ್ಬರ ದೇಹದಲ್ಲಿ 99 ಕಲ್ಲುಗಳು ಪತ್ತೆಯಾಗಿದ್ದು ಆಪರೇಷನ್ ಮೂಲಕ ವೈದ್ಯರು ಕಲ್ಲುಗಳನ್ನು ಹೊರ ತೆಗೆದಿದ್ದಾರೆ.
45 ವರ್ಷದ ಸಲ್ಮಾ ಎಂಬುವವರ ದೇಹದಲ್ಲಿ 99 ಕಲ್ಲುಗಳು ಪತ್ತೆಯಾಗಿದ್ದವು. ತುಮಕೂರು ಜಿಲ್ಲಾಸ್ಪತ್ರೆ ವೈದ್ಯ ಡಾ. ವಾಸೀಂ ಹಾಗೂ ತಂಡದಿಂದ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಹಲವು ದಿನಗಳಿಂದ ಮಹಿಳೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಪಿತ್ತಕೋಶದಲ್ಲಿ ಕಲ್ಲುಗಳು ಕಂಡು ಬಂದಿತ್ತು. ಸ್ಕ್ಯಾನಿಂಗ್ ಮೂಲಕ ವೈದ್ಯರು ಪತ್ತೆ ಹಚ್ಚಿದ್ದರು. ಬಳಿಕ ಆಪರೇಷನ್ ಮೂಲಕ ಹೊರತೆಗೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.